ಬೆಂಗಳೂರು: ನಗರದ ಪುರಭವನದ ಎದುರು ಕನ್ನಡ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಆರ್ದ್ರಾ ಎಂಬಯುವತಿ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ.

ಯುವತಿಯನ್ನು ವಶಕ್ಕೆ ಪಡೆದಿರುವ ಎಸ್‌ಜೆ ಪಾರ್ಕ್ ಪೊಲೀಸರು, ಠಾಣೆಗೆ ಕರೆದೊಯ್ದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ:ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಸಿಎಂ ಬಿ.ಎಸ್. ಯಡಿಯೂರಪ್ಪ

‘ಪ್ರತಿಭಟನೆ ವೇಳೆ ಯುವತಿ ಕರಪತ್ರ ಹಿಡಿದುಕೊಂಡು ಕುಳಿತಿದ್ದರು. ಏಕಾಏಕಿ ಘೋಷಣೆ ಕೂಗಿದ್ದಾರೆ. ಆಕೆ ಮಲ್ಲೇಶ್ವರ ನಿವಾಸಿ. ಖಾಸಗಿ ಕಂಪನಿ ಉದ್ಯೋಗಿ ಎಂಬುದು ತಿಳಿದುಬಂದಿದೆ’ ಎಂದು ಡಿಸಿಪಿ ಚೇತನ್‌ಸಿಂಗ್ ಹೇಳಿದರು.

ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಪುರಾವೆ ಇಲ್ಲ
ಪಾಕ್ ಪರ ಯುವತಿ ಘೋಷಣೆ ಕೂಗಿದ್ದಾಳೆಂದು ಎಂಬುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಡಿಸಿಪಿ ಚೇತನ್‌ಸಿಂಗ್ ರಾಥೋಡ್ ಹೇಳಿದರು.

‘ಯುವತಿ ಭಿತ್ತಿಪತ್ರ ಮಾತ್ರ ಪ್ರದರ್ಶಿಸಿದ್ದಾರೆ. ಘೋಷಣೆ ಕೂಗಿದ ಬಗ್ಗೆ ಕೆಲವರು ಆರೋಪ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾ ಸ್ಥಳದಿಂದ ಯುವತಿಯನ್ನು ಠಾಣೆಗೆ ಕರೆತರಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.