ಬೆಂಗಳೂರು: ‘ಬೆಂಗಳೂರು ಕರಗ ಬುಧವಾರ (ಏ. 1ರಂದು) ಮಧ್ಯರಾತ್ರಿ 12.30ಕ್ಕೆ ನಡೆಯಲಿದೆ’ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಳೆದ ಬಾರಿ ಕರಗ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಿದ್ದರು. ಈ ಬಾರಿಯೂ ಅವರಿಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಆಹ್ವಾನ ನೀಡಿದ್ದೇನೆ’ ಎಂದರು.

‘ಈ ಬಾರಿ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಉತ್ಸವಕ್ಕೆ ಅಗತ್ಯವಾದ ವಿಧಿವಿಧಾನಗಳನ್ನು ಈಗಾಗಲೇ ಆರಂಭಿಸಲಾಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಯವರು, ಅನ್ಯ ರಾಜ್ಯದವರು ಕರಗ ನೋಡಲು ಬರಬೇಕು’ ಎಂದು ಆಶಿಸಿದರು.

‘ಕರಗ ಸಂದರ್ಭದಲ್ಲಿ ಯಾವುದೇ ರೀತಿ ಸಂಚಾರ ದಟ್ಟಣೆ ಆಗದಂತೆ ವ್ಯವಸ್ಥೆ ಮಾಡಲಾಗುವುದು. ಕಡಲೆಕಾಯಿ ಪರಿಷೆಯನ್ನು ನಾವು ಐದು ದಿನ ಮಾಡಿದ್ದೆವು. ಅದಕ್ಕೆ ವ್ಯಾಪಕ ಪ್ರಚಾರ ನೀಡಿದ್ದೆವು. ಅಂದಾಜು 15 ಲಕ್ಷ ಜನ ಬಂದಿದ್ದರು. ಬೆಂಗಳೂರಿನವರು ಕರಗಕ್ಕೆ ಹೆಚ್ಚು ಸಂಖ್ಯೆಯಲ್ಲಿ ಬರಬೇಕು’ ಎಂದು ಮನವಿ ಮಾಡಿದರು.

ಪಾಲಿಕೆ ಬಜೆಟ್ಗೆ ಸರ್ಕಾರದ ಅವಲಂಬನೆ ಕುರಿತು ಕೇಳಿದ ಪ್ರಶ್ನೆಗೆ, ‘ಮೊದಲಿನಿಂದಲೂ ಹೀಗೆ ನಡೆದುಕೊಂಡು ಬಂದಿದೆ. ಕಡಿಮೆಯಾಗುವ ಹಣವನ್ನು ಸರ್ಕಾರ ಕೊಡುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.