ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲು ಬೆಂಗಳೂರು–ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಾಸನ, ಮಂಗಳೂರು ಜಂಕ್ಷನ್, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಸೇವೆಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲ ಆಗಲಿದೆ. ಅಲ್ಲದೆ, ಕರಾವಳಿ ಭಾಗದಲ್ಲಿರುವ ಪುಣ್ಯಕ್ಷೇತ್ರಗಳಿಗೆ ಯಾತ್ರಾರ್ಥಿಗಳು ಹೋಗಿ ಬರುವುದು ಸುಲಭವಾಗುತ್ತದೆ. ಶಿಕ್ಷಣ ಹಾಗೂ ವೃತ್ತಿಪರ ಕಾರಣಗಳಿಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂಬ ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತದ ಐಟಿ ರಾಜಧಾನಿ ಆಗಿರುವ ಬೆಂಗಳೂರು ಮತ್ತು ಬಂದರು ನಗರ ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕದ ಉಳಿದೆಲ್ಲಾ ಪ್ರಮುಖ ವಾಣಿಜ್ಯ ಕೇಂದ್ರಗಳು, ಬಂದರುಗಳು ಮತ್ತು ಪ್ರವಾಸಿ ತಾಣಗಳಿಗೆ ಹಾಗೂ ಗೋವಾ ನಡುವೆ ನೇರ ಹಾಗೂ ವೇಗದ ರೈಲು ಸಂಪರ್ಕ ಕಲ್ಪಿಸುವುದರಿಂದ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಚುರುಕಾಗಲಿವೆ ಎಂದು ಅವರು ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.