ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು-ಮೈಸೂರು ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿದೆ: ಅನಿತಾ ಕುಮಾರಸ್ವಾಮಿ

Last Updated 18 ಮಾರ್ಚ್ 2023, 16:22 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ, ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುತ್ತದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅವರು, ಬೆಳಗಿನ ಜಾವ ಸುರಿದ ಒಂದು ಸಣ್ಣ ಮಳೆಗೇ ಹೆದ್ದಾರಿ ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ ಎಂದು ಕಿಡಿಕಾರಿದ್ದಾರೆ.

ಹ್ಯಾಶ್ ಟ್ಯಾಗ್ ಬಳಸಿ #ಎಕ್ಸ್_ಪ್ರೆಸ್_ಹೆಮ್ಮಾರಿ ಎಂದು ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ಸರ್ಕಾರದ ವಿರುದ್ಧ ಅನಿತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT