ನವದೆಹಲಿ: ಬೆಂಗಳೂರು–ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ಆರಂಭಿಸಬೇಕು ಎಂದು ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರತ್ಯೇಕವಾಗಿ ಮನವಿ ಮಾಡಿದರು.

ರೈಲ್ವೆ ಸಚಿವರನ್ನು ಸಂಸತ್ ಭವನದಲ್ಲಿ ಬುಧವಾರ ಭೇಟಿ ಮಾಡಿದ ಜೋಶಿ, ‘ಬೆಂಗಳೂರು-ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ‘ ಎಂದರು.

‘ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೇ ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ’ ಎಂದರು.

ಈ ಪ್ರಸ್ತಾವಕ್ಕೆ ವೈಷ್ಣವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

‘ರಾಜ್ಯಕ್ಕೆ ಹೈ ಸ್ಪೀಡ್ ರೈಲು ಕಾರಿಡಾರ್ಗಳನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಅದಕ್ಕೆ ಹೆಚ್ಚುವರಿಯಾಗಿ ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲು ಕಾರಿಡಾರ್ ನೀಡಲಾಗುತ್ತದೆ. ಈ ಮಾರ್ಗವು ಹುಬ್ಬಳ್ಳಿ, ಬೆಳಗಾವಿ ಮೂಲಕ ಹಾದು ಹೋಗಲಿದೆ ಎಂಬುದಾಗಿ ರೈಲ್ವೆ ಸಚಿವರು ತಿಳಿಸಿದರು‘ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ಬೆಂಗಳೂರು-ಮುಂಬೈಗೆ ಹೊಸ ರೈಲು ಆರಂಭಿಸಲಾಗುವುದು ಎನ್ನುವ ಮಾಹಿತಿಯನ್ನು ರೈಲ್ವೆ ಸಚಿವರು ತಮಗೆ ನೀಡಿದರು. ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು-ಮುಂಬೈ ನಡುವಿನ ಹೊಸ ರೈಲಿನಿಂದ ಕರ್ನಾಟಕಕ್ಕೆ ಮತ್ತಷ್ಟು ಅನುಕೂಲ ಆಗಲಿದೆ‘ ಎಂದು ಅವರು ತಿಳಿಸಿದರು.

ಹೊಸ ರೈಲು ಸಂಪರ್ಕ ಮತ್ತು ಹಾಲಿ ರೈಲು ಮಾರ್ಗಗಳಲ್ಲಿ ವನ್ಯಜೀವಿಗಳ ಅಪಘಾತಗಳನ್ನು ತಡೆಗಟ್ಟಲು ರೈಲ್ವೆ ಬೇಲಿ ಮತ್ತು ಬ್ಲಾಕ್ ಕಾರಿಡಾರ್ಗಳ ಅನುಷ್ಠಾನದ ಕುರಿತು ಮಾತುಕತೆ ನಡೆಸಲಾಯಿತು ಎಂದು ಸಚಿವರು ಹೇಳಿದರು.

ಮಂಡ್ಯ ಲೋಕಸಭೆ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಾಕಿ ಇರುವ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ರಾಮನಗರದಲ್ಲಿ ನಿಲುಗಡೆ ಕೋರಿ ಮನವಿ ಮಾಡಲಾಯಿತು ಎಂದರು.

ಉಕ್ಕು ಹೂಡಿಕೆ:

ಹಣಕಾಸು ಸಚಿವರ ಜತೆಗೆ ಚರ್ಚೆ ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳನ್ನು ಬಗ್ಗೆ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾನ್ಯ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.