ಬೆಂಗಳೂರು: ‘ಬಂಜಾರ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇಧಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಸಂಬಂಧ ನಿರ್ಣಯ ಅಂಗೀಕರಿಸಲಾಗುತ್ತದೆ. ಬಂಜಾರ ವಿಶ್ವಕೋಶವನ್ನು ರಚಿಸುವ ಅಗತ್ಯವಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ ಅನುದಾನ ಒದಗಿಸಲಾಗುತ್ತದೆ ಮತ್ತು ತಜ್ಞರ ಸಮಿತಿ ರಚಿಸಲಾಗುತ್ತದೆ. ಸಮುದಾಯದ ಎಲ್ಲರೂ ಸಾಧ್ಯವಿರುವ ಎಲ್ಲೆಡೆ ಬಂಜಾರ ಭಾಷೆಯನ್ನೇ ಬಳಸಬೇಕು’ ಎಂದು ಕರೆ ನೀಡಿದರು.

2025ನೇ ಸಾಲಿನ ‘ಸಂತ ಸೇವಾಲಾಲ್ ಪ್ರಶಸ್ತಿ’ಗೆ ರೂಪ್ಲಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಪ್ರಶಸ್ತಿಯ ಬಿನ್ನವತ್ತಳೆಯನ್ನು ಕಾರ್ಯಕ್ರಮದಲ್ಲಿ ಓದಲಾಯಿತು.

ಕಲೆ ಮತ್ತು ಸಾಮಾಜಿಕ ಸೇವೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರಿಗೆ ಕಾರ್ಯಕ್ರಮದಲ್ಲಿ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಫಲಕ ಮತ್ತು ತಲಾ ₹50,000 ನಗದು ಒಳಗೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಫಲಕ ಮತ್ತು ತಲಾ ₹25,000 ನಗದು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.