ಬೆಂಗಳೂರು: ಕಳೆದ ಏಪ್ರಿಲ್ 18 ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ತಂದ 4 ಚೀತಾಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಅವರೊಂದಿಗೆ ಸಭೆ ನಡೆಸಿದ ಅವರು, ಚೀತಾಗಳಿಗಾಗಿಯೇ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಆವರಣದಲ್ಲಿ ಅವುಗಳನ್ನು ಬಿಡಲಾಗುವುದು ಎಂದು ಹೇಳಿದರು.

ವನ್ಯಜೀವಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಏ.18 ರ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವ ಖಂಡ್ರೆ ಬರ ಮಾಡಿಕೊಂಡರು.

ಬನ್ನೇರುಘಟ್ಟ ಪರಿಸರ, ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳಲು ಈ ಚೀತಾಗಳನ್ನು ಪ್ರತ್ಯೇಕವಾಗಿ ಇಡಲಾಗಿತ್ತು. ಇವುಗಳ ಆರೋಗ್ಯದ ಬಗ್ಗೆ ಸತತ ನಿಗಾ ಇಡಲಾಗಿತ್ತು. ಪ್ರಸ್ತುತ ಚೀತಾಗಳು ಸಂಪೂರ್ಣವಾಗಿ ಆರೋಗ್ಯವಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ಜೂನ್ ಮೊದಲ ವಾರದಲ್ಲಿ ಪ್ರವಾಸಿಗರಿಗೆ ಚೀತಾ ನೋಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.