ಬೆಂಗಳೂರು: ‘ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸದ್ಯ ನೀಡುತ್ತಿರುವ 81 ಸೇವೆಗಳ ಜೊತೆಗೆ ಇನ್ನೂ 208 ಸೇವೆಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆರಂಭಿಸಲಾಗುವುದು ಎಂದು 2024-25ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾಗಿತ್ತು. ಅದರಂತೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಗ್ರಾಮೀಣ ಭಾಗದ ನಾಗರಿಕರಿಗೆ ಅನುಕೂಲ ಆಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯ ನೀಡಲಾಗುವುದು ಎಂದಿದ್ದಾರೆ.

ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ 46 ಇಲಾಖೆಗಳ 800ಕ್ಕಿಂತಲೂ ಹೆಚ್ಚು ಸೇವೆಗಳಲ್ಲಿ ಗ್ರಾಮೀಣ ಜನತೆಗೆ ಉಪಯೋಗ ಆಗುವಂಥ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕವೂ ಒದಗಿಸುವುದರಿಂದ ಗ್ರಾಮೀಣ ಜನತೆಗೆ ಒಂದೇ ಸೂರಿನಡಿ ಎಲ್ಲ ಇಲಾಖೆಗಳ ಸೇವೆಗಳನ್ನು ನೀಡಿದಂತಾಗುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ಅಧೀನದಲ್ಲಿ ಬರುವ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾ ಸಿಂಧು ಪೋರ್ಟಲ್ನಲ್ಲಿ 800ಕ್ಕಿಂತಲೂ ಹೆಚ್ಚು ಸೇವೆಗಳನ್ನು ಈಗ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.