ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರುಳಸಿದ್ದಪ್ಪಗೆ ‘ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ’

Last Updated 16 ಫೆಬ್ರುವರಿ 2023, 16:20 IST
ಅಕ್ಷರ ಗಾತ್ರ

ಬೆಂಗಳೂರು: ಲಂಡನ್‌ನ ಬಸವ ಅಂತರಾಷ್ಟ್ರೀಯ ಪ್ರತಿಷ್ಠಾನ ನೀಡುವ ‘ಡಾ.ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ’ಗೆ ಸಾಹಿತಿ ಕೆ. ಮರುಳಸಿದ್ದಪ್ಪ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ಇದೇ 23ರಂದು ಇಲ್ಲಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಹಾಗೂ ವಿಮರ್ಶಕಿ ಎಂ.ಎಸ್. ಆಶಾದೇವಿ ಉಪಸ್ಥಿತರಿರಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹಾದೇವಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT