ಹುಬ್ಬಳ್ಳಿ: ‘ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ‘ಮುಗಿಸಿ’ದರೆ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಯ ಹೋರಾಟ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಸರ್ಕಾರ ಭಾವಿಸಿದಂತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸ್ವಾಮೀಜಿ ಅವರು ವಿಷಪೂರಿತ ಆಹಾರ ಸೇವನೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತಿನ್ನುವ ಆಹಾರದಲ್ಲಿ ವಿಷ ಬೆರೆಸಿರುವುದಾಗಿ ಸ್ವಾಮೀಜಿಯವರೇ ಸಂಶಯ ವ್ಯಕ್ತಪಡಿಸಿದ್ದು, ಇದು ಸತ್ಯವಾಗಿದ್ದರೆ ದೊಡ್ಡ ದೃಷ್ಕೃತ್ಯವಾಗಿದೆ. ಕೆಲ ದಿನಗಳ ಹಿಂದೆ ಪಂಚಮಸಾಲಿ ಮಠಕ್ಕೆ ಬೀಗ ಹಾಕಲಾಗಿತ್ತು. ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಸ್ವಾಮೀಜಿ ಮಠಕ್ಕೆ ಮರಳಿದ್ದರು. ಅಲ್ಲಿ ನಡೆಯುವ ಬೆಳವಣಿಗೆ ಗಮನಿಸಲು ಕೆಲವರು ಮುಸ್ಲಿಂ ಯುವಕರನ್ನು ಬಿಟ್ಟಿದ್ದರು. ಅವರು ಅಡುಗೆ ಮನೆಗೆ ಹೋಗಿದ್ದ ದಿನವೇ, ಸ್ವಾಮೀಜಿ ಅವರ ಆರೋಗ್ಯ ಹದಗೆಟ್ಟಿತ್ತು’ ಎಂದು ಆರೋಪಿಸಿದರು.

‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸಲು ಸ್ವಾಮೀಜಿ ನಿರಂತರವಾಗಿ ಹೋರಾಡುತ್ತಿದ್ದಾರೆ. ಇತ್ತೀಚಿಗೆ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಲಿಂಗಾಯತ ಪಂಚಮಸಾಲಿ ಸಮಾಜ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸ್ವಾಮೀಜಿಗೆ ತೊಂದರೆ ಕೊಟ್ಟು, ಹೋರಾಟ ಹತ್ತಿಕ್ಕುವ ಷಡ್ಯಂತ್ರ ನಡೆಯುತ್ತಿದೆ. ಅದು ಅಸಾಧ್ಯವಾಗಿದ್ದು, ಸೂಕ್ತ ಸಮಯದಲ್ಲಿ ಸಮಾಜ ತಕ್ಕ ಉತ್ತರ ನೀಡಲಿದೆ’ ಎಂದರು.

‘ಬಸವಜಯ ಮೃತ್ಯುಂಜಯ ಸ್ವಾಮೀಜಿ ಯಾವ ಪಕ್ಷಕ್ಕೂ, ಮಠಕ್ಕೂ ಸೀಮಿತವಾಗಿಲ್ಲ. ಅವರು ಸಮಾಜದ ಅಭ್ಯದಯಕ್ಕೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹಿಂದೆ ನಮ್ಮ ಬಿಜೆಪಿ ಸರ್ಕಾರ 2ಎ ಮೀಸಲಾತಿ ನೀಡುವುದಾಗಿ ಘೋಷಿಸಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಜಾರಿಗೆ ತರುತ್ತಿಲ್ಲ’ ಎಂದು ಬೆಲ್ಲದ ಆರೋಪಿಸಿದರು.
.ಪಂಚಮಸಾಲಿ ಪೀಠಕ್ಕೆ ಪರ್ಯಾಯ ಸ್ವಾಮೀಜಿ: ವಿಜಯಾನಂದ ಕಾಶಪ್ಪನವರ.ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆಗೆ ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.