ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 17ಕ್ಕೆ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅನಾವರಣ

Published 13 ಫೆಬ್ರುವರಿ 2024, 15:12 IST
Last Updated 13 ಫೆಬ್ರುವರಿ 2024, 15:12 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಸವಣ್ಣನವರ ಭಾವಚಿತ್ರವನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಅನಾವರಣ ಮಾಡಿ ಮಾತನಾಡಿದ ಅವರು, ‘ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇದೇ 17ರಂದು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಸಂಸ್ಥೆಯ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ’ ಎಂದರು.

‘ಮನುಷ್ಯನು ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕೃತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರ ಇರಬೇಕು. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

‘ಬಸವಾದಿ ಶರಣರ ವಚನಗಳು ಹಿಂದೆ, ಇಂದು ಹಾಗೂ ಮುಂದೆಯೂ ಪ್ರಸ್ತುತವಾಗಿರಲಿವೆ. ಬಸವಣ್ಣನವರ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ’ ಎಂದೂ ಹೇಳಿದರು.

‘ನುಡಿದಂತೆ ನಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯದಿಂದ ಅವರು ವಚನಗಳನ್ನು ರಚಿಸಿದರು. ಕಾಯಕ, ದಾಸೋಹವನ್ನು ಬೋಧಿಸಿದ ಬಸವಣ್ಣನವರು ಯಾರೂ ಕುಳಿತು ತಿನ್ನದೇ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದರು. ಬಡವರು ಬಡವರಾಗಿಯೇ ಉಳಿಯುವ ಹಾಗೂ ಶ್ರೀಮಂತರ ಕುಳಿತು ತಿನ್ನುವ ವ್ಯವಸ್ಥೆ ಹೋಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT