ಬೆಂಗಳೂರು: ‘ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದರೂ ಕ್ರಮಕೈಗೊಳ್ಳದ ಹೈಕಮಾಂಡ್ ಎಲ್ಲಿದೆ ಎನ್ನುವ ಪ್ರಶ್ನೆ ಮೂಡಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯತೀಂದ್ರ ಹೇಳಿಕೆ ಕುರಿತು ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ. ಎಲ್ಲ ವಿಚಾರಕ್ಕೂ ಹೈಕಮಾಂಡ್ ನಿರ್ಧಾರವೇ ಅಂತಿಮ ಎನ್ನುತ್ತಿದ್ದರು. ಯತೀಂದ್ರ ಹೇಳಿಕೆ ಗಮನಿಸಿದರೆ ಹೈಕಮಾಂಡ್ ಎಲ್ಲಿದೆ ಅನ್ನುವ ಪ್ರಶ್ನೆಯನ್ನು ಕಾಂಗ್ರೆಸಿಗರೇ ಕೇಳುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಇದ್ದಾರಾ? ಮುಖ್ಯಮಂತ್ರಿ ಕುಟುಂಬದವರ ಸುತ್ತ ಇದ್ದಾರಾ’ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಆರ್ಥಿಕ ದುಸ್ಥಿತಿ ಮುಚ್ಚಿಕೊಳ್ಳಲು ಬಿಜೆಪಿ ಸಂಸದರ ಮೇಲೆ ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಕೋವಿಡ್ ವೇಳೆ ರಾಜ್ಯಕ್ಕೆ ಕೇಂದ್ರದಿಂದ ನಿರೀಕ್ಷೆಯಷ್ಟು ಹಣ ಬಂದಿದೆ. ರಾಜ್ಯದ ರೈಲ್ವೆ ಯೋಜನೆಗಳಿಗೂ ಹೆಚ್ಚು ಹಣ ಬಂದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.