ಬೆಂಗಳೂರು: ಇಂಧನ ಮಿತವ್ಯಯದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯಾವುದಕ್ಕೂ ಕಡಿವಾಣ ಹಾಕಿಲ್ಲ, ಸ್ವಯಂ ಪ್ರೇರಿತರಾಗಿ ಮಿತವ್ಯಯವನ್ನು ಅಳವಡಿಸಿಕೊಳ್ಳಲು ಸಲಹೆ ನೀಡಿದ್ದಾರೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

‘ಒಬ್ಬ ನಾಯಕನಾಗಿ ನೈತಿಕತೆ ಇರುವುದರಿಂದ ಈ ರೀತಿಯ ಕರೆ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ನಾಯಕರು ಭಾರತ ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಅವರು ಟೀಕಿಸಿದರು.

‘ಲಾಲ್ ಬಹದ್ದೂರ್ ಶಾಸ್ತ್ರಿ ಪ್ರಧಾನಿ ಆಗಿದ್ದಾಗ ದೇಶದಲ್ಲಿ ಆಹಾರ ಕೊರತೆ ಉಂಟಾಗಿತ್ತು. ಆಗ ಅವರು ಒಂದು ಹೊತ್ತು ಉಪವಾಸ ಮಾಡಲು ಜನರಿಗೆ ಹೇಳಿದ್ದರು. ಪ್ರಧಾನಿ ಮೋದಿ ಶ್ರೀಮಂತರಿಗೆ ಎಲ್ಪಿಜಿ ಸಿಲಿಂಡರ್ ಸಹಾಯಧನ ಬಿಟ್ಟುಕೊಡುವಂತೆ ಹೇಳಿದ್ದರು. ಆರು ಕೋಟಿ ಜನರು ಬಿಟ್ಟುಕೊಟ್ಟಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಸಲಹೆಗಳನ್ನು ಕೊಟ್ಟಿದ್ದರು. ದೇಶದ ಜನ ಅದನ್ನು ಪಾಲಿಸಿದ್ದರಿಂದ ದೇಶದಲ್ಲಿ ಕೋವಿಡ್ ಎದುರಿಸಲು ಸಾಧ್ಯವಾಯಿತು’ ಎಂದು ಬೊಮ್ಮಾಯಿ ಹೇಳಿದರು.

‘ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಂಗಾರದ ಬಗ್ಗೆ ವ್ಯಾಮೋಹ ಬೇಡ ಎಂದು ಸಲಹೆ ನೀಡಿದ್ದರು. ಹಿಂದೆ ಇರಾನ್–ಇರಾಕ್ ಯುದ್ಧ ಆದಾಗ ಎರಡೇ ದಿನದಲ್ಲಿ ಪೆಟ್ರೋಲ್ ಬಂಕ್ಗಳ ಮುಂದೆ ಕಿಲೋ ಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದವು. ಈಗ ಯುದ್ಧ ಶುರುವಾಗಿ ಎರಡು ತಿಂಗಳು ಕಳೆದರೂ ಅಂತ ಪರಿಸ್ಥಿತಿ ಇಲ್ಲ’ ಎಂದು ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ: ಅಶೋಕ

‘ಇತಿಹಾಸದ ಅರಿವೂ ಇಲ್ಲದ, ಆರ್ಥಿಕ ನಿರ್ವಹಣೆಯ ಗಂಧ–ಗಾಳಿಯೂ ಗೊತ್ತಿಲ್ಲದ ಈಗಿನ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ಮೋದಿ ಅವರ ಪ್ರತಿಯೊಂದು ನಡೆಯನ್ನೂ ವಿರೋಧಿಸುವುದೇ ಒಂದು ನಿತ್ಯ ಕಾಯಕವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.

‘ರಾಷ್ಟ್ರದ ಹಿತದೃಷ್ಟಿಯಿಂದ ಮೋದಿ ಅವರು ನೀಡುವ ದೂರದೃಷ್ಟಿಯ ಆರ್ಥಿಕ ಸಲಹೆಗಳನ್ನು ಲೇವಡಿ ಮಾಡುವ ಈ ಕಾಂಗ್ರೆಸ್ಸಿಗರು ಒಮ್ಮೆ ತಮ್ಮದೇ ಪಕ್ಷದ ಇತಿಹಾಸವನ್ನು ತಿರುವಿ ಹಾಕಲಿ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-1968373682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.