‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಾನು ಇಕ್ಕಟ್ಟಿಗೆ ಸಿಲುಕಿಸಿದ್ದೇನೆ ಎಂದು ಹೇಳಿದ್ದಾರೆ. ಅದರ ಅಗತ್ಯ ನನಗಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಸಲಹೆ ನೀಡಿದ್ದೆ. ಸಲಹೆ ಸ್ವೀಕರಿಸಲು ಅವರು ಸಿದ್ಧರಿಲ್ಲ. ಸರ್ಕಾರದ ನಡೆಯೇ ರಾಜ್ಯದ ರೈತರು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅವರು ವಕೀಲರ ಮಾತಿನಂತೆ ನಡೆಯುತ್ತಿದ್ದಾರೆ. ಸರ್ಕಾರ ನಡೆಸುವವರಿಗೆ ಜವಾಬ್ದಾರಿ, ಅರಿವು ಇರಬೇಕು’ ಎಂದಿದ್ದಾರೆ.