ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಖಾತೆಗೆ ₹ 956.71 ಕೋಟಿ ‘ಸಿಎಂ ಕಿಸಾನ್ ಸಮ್ಮಾನ್’ ಸಹಾಯಧನ ವರ್ಗಾವಣೆ: ಸಿಎಂ

Last Updated 2 ಜೂನ್ 2022, 11:05 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 47.83 ಲಕ್ಷ ರೈತರಿಗೆ ₹ 956.71 ಕೋಟಿ ಆರ್ಥಿಕ ಸಹಾಯಧನ ವರ್ಗಾಯಿಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರೈತರ ಖಾತೆಗಳಿಗೆ ಸಹಾಯಧನದ ಮೊತ್ತ ವರ್ಗಾಯಿಸಿದ್ದು, 2018-19 ರಿಂದ 2021-22 ರವರೆಗೆ ಕೇಂದ್ರ ಸರ್ಕಾರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು ₹3,864.66 ಕೋಟಿ ಪಾವತಿಯಾದಂತಾಗಿದೆ. 2021-22 ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ ₹1,975.12 ಕೋಟಿ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ.

ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿ ಹೆಚ್ಚು ಅಂದರೆ ಶೇ 96 ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದೆ. ಕಳೆದ ಬಾರಿ 2020- 21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿ ಇಲಾಖೆಗೆ ಪ್ರಶಸ್ತಿ ಲಭಿಸಿದೆ.

2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ ₹4,000 ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆ ಆಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್, ನಿರ್ದೇಶಕಿ ನಂದಿನಿಕುಮಾರಿ, ಜಲಾನಯನ ಇಲಾಖೆ ಆಯುಕ್ತ ಡಾ. ವೆಂಕಟೇಶ್, ನಿರ್ದೇಶಕ ಶ್ರೀನಿವಾಸ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT