ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌ ದಂಪತಿಗೆ ಜಾಮೀನು ಮಂಜೂರು

Last Updated 1 ಸೆಪ್ಟೆಂಬರ್ 2022, 11:08 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಆಡಳಿತಾಧಿಕಾರಿ ಎಸ್‌.ಕೆ.ಬಸವರಾಜನ್‌ ಹಾಗೂ ಪತ್ನಿ ಸೌಭಾಗ್ಯ ವಿರುದ್ಧ ದಾಖಲಾಗಿದ್ದ ಕಿರುಕುಳ, ಮಕ್ಕಳ ಅಪಹರಣ ಪ್ರಕರಣದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿತು.

ಮುರುಘಾ ಮಠದ ಹಾಸ್ಟೆಲ್‌ ವಾರ್ಡನ್‌ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಬಸವರಾಜನ್‌ ದಂಪತಿ ಪರ ವಕೀಲ ರಾಮಚಂದ್ರ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶೆ ಅನಿತಾ ಕುಮಾರಿ ಅವರು ಗುರುವಾರ ಕೈಗೆತ್ತಿಕೊಂಡರು.

ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿ ವಿಚಾರಣೆಗೆ ಬಂದಿತು. ವಾರ್ಡನ್‌ ಪರ ಹಾಜರಾದ ವಕೀಲರು ತಕರಾರು ಸಲ್ಲಿಸಿ, ಆರೋಪಿಗಳು ಕೋರ್ಟ್‌ಗೆ ಹಾಜರಾಗುವಂತೆ ಕೋರಿಕೊಂಡರು. ನ್ಯಾಯಾಧೀಶರ ಸೂಚನೆಯ ಮೇರೆಗೆ ಆರೋಪಿಗಳು ನ್ಯಾಯಾಲಯಕ್ಕೆ ಬಂದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT