ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕುಡಿಯುವ ನೀರಿಗಾಗಿ ಕಾಲುವೆಗಳಿಗೆ ನೀರು ಹರಿಸಲಾಗಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.

ನಾರಾಯಣಪುರ ಎಡದಂಡೆ ಕಾಲುವೆಗೆ 2000 ಕ್ಯುಸೆಕ್ ಮತ್ತು ಬಲದಂಡೆ ಕಾಲುವೆಗೆ 200 ಕ್ಯುಸೆಕ್ನಂತೆ ಭಾನುವಾರ ಸಂಜೆಯಿಂದಲೇ ನೀರು ಹರಿಸಲಾಗಿದೆ. ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿರುವುದರಿಂದ ಹಿರಿಯ ಅಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಕಲಬುರ್ಗಿ ಮಹಾನಗರ, ಯಾದಗಿರಿ, ಹಾಗೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನ, ಜಾನುವಾರುಗಳಿಗೆ ತುಂಬ ತೊಂದರೆಯಾಗಿದೆ.

ಈ ಹಿನ್ನೆಲೆಯಲ್ಲಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದಂತೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ಒಟ್ಟು 1 ಟಿಎಂಸಿ ನೀರು ಹರಿದು ಬರುತ್ತಿದೆ. ಕಲಬುರ್ಗಿ ನಗರಕ್ಕೆ ಜೇವರ್ಗಿ ಶಾಖಾ ಕಾಲುವೆಯ ಮೂಲಕ ನೀರನ್ನು ಹರಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ನೀರು ಪೋಲಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.