ನವದೆಹಲಿ: ಚಿಕ್ಕಬಳ್ಳಾಪುರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಯಡಿ ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಒತ್ತಾಯಿಸಿದರು.

ಲೋಕಸಭೆಯ ಶುಕ್ರವಾರದ ಕಲಾಪದಲ್ಲಿ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲು ನಾನು 2007ರಿಂದಲೂ ಪ್ರಯತ್ನ ಮಾಡುತ್ತಿದ್ದೇನೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಭಾಗಕ್ಕೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿದ ನೀರನ್ನು ಹರಿಸುವ ಯೋಜನೆಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಅನೇಕ ಉತ್ತಮ ಯೋಜನೆಗಳನ್ನು ರದ್ದು ಮಾಡಿದೆ. ಅದೇ ರೀತಿ ಮೂರನೇ ಹಂತದ ಸಂಸ್ಕರಣೆಯ ಯೋಜನೆಯನ್ನು ಕೂಡ ರದ್ದು ಮಾಡಿದೆ’ ಎಂದು ಆರೋಪಿಸಿದರು.

ಬಯಲುಸೀಮೆಗೆ ಈಗಾಗಲೇ ಪೂರೈಕೆಯಾಗುತ್ತಿರುವ ದ್ವಿತೀಯ ಹಂತದ ಸಂಸ್ಕರಣೆಯ ನೀರನ್ನು ಕೆಲವು ಸಂಸ್ಥೆಗಳು ಪರೀಕ್ಷೆ ಮಾಡಿದ್ದು, ಈ ನೀರು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ವರದಿ ನೀಡಿವೆ. ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲೇ ಸಂಸ್ಕರಣೆ ಮಾಡಿ ಬಳಕೆ ಮಾಡಬೇಕೆಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಈಗಾಗಲೇ ತಿಳಿಸಲಾಗಿದೆ. ಮೊದಲಿಗೆ ಈ ನಿಯಮವನ್ನು ಕರ್ನಾಟಕ ಸರ್ಕಾರ ಅನುಷ್ಠಾನ ಮಾಡಬೇಕಿದೆ. ಜೊತೆಗೆ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಶಾಶ್ವತ ನೀರಾವರಿ ಕಲ್ಪಿಸಲು ಕೃಷ್ಣಾ ನದಿಯಿಂದ ಕನಿಷ್ಠ 15 ಟಿಎಂಸಿ ನೀರನ್ನು ಬಯಲುಸೀಮೆಗೆ ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.