ಬೆಂಗಳೂರು: ಬಿಬಿಎಂಪಿಯ ಎರಡು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಸಗಾಯಪುರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಕಾಂಗ್ರೆಸ್–ಜೆಡಿಎಸ್ ಮೈತ್ರಿಕೂಟ ಅಂತಿಮಗೊಳಿಸಿದೆ.

ವಿ. ಏಳುಮಲೈ ಅವರ ನಿಧನದಿಂದ ತೆರವಾದ ಈ ಕ್ಷೇತ್ರಕ್ಕೆ ಅವರ ಸಹೋದರಿ ಪಳನಿಯಮ್ಮ ಅವರನ್ನೇ ಅಭ್ಯರ್ಥಿ ಮಾಡಲು ಪಕ್ಷ ತೀರ್ಮಾನಿಸಿದೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ನಿಧನದಿಂದ ತೆರವಾಗಿರುವಕಾವೇರಿಪುರ ವಾರ್ಡ್ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ‘ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಶುಕ್ರವಾರ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು’ ಎಂದು ಜೆಡಿಎಸ್ ನಗರ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.