ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಚುನಾವಣೆ ಸದ್ಯಕ್ಕಿಲ್ಲ: ಡಿ.ಕೆ. ಶಿವಕುಮಾರ್‌

Published 23 ಜನವರಿ 2024, 20:54 IST
Last Updated 23 ಜನವರಿ 2024, 20:54 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭೆ ಚುನಾವಣೆ ನಂತರ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳು ನಡೆಯಲಿವೆ. ಪಕ್ಷ ಸಂಘಟನೆಯಲ್ಲಿನ ಸಾಮರ್ಥ್ಯ ಪರಿಗಣಿಸಿ ಪಾಲಿಕೆ ಚುನಾವಣೆಯಲ್ಲಿ ಅವಕಾಶ ನೀಡಲಾಗುವುದು’ ಎಂದು ಪಕ್ಷದ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಬೆಳಿಗ್ಗೆ 10.30ರ ನಂತರ ಕೆಪಿಸಿಸಿ ಕಚೇರಿ ಹಾಗೂ ಸರ್ಕಾರಿ ಗೃಹಕಚೇರಿ ಬಳಿ ನನ್ನನ್ನು ಬಂದು ಭೇಟಿ ಮಾಡಿ. ನಾವು ಪಕ್ಷದ ಕೆಲಸವನ್ನು ಮಾಡಬೇಕು. ಎಲ್ಲರೂ ಸೇರಿ ಬೆಂಗಳೂರಿನ ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT