ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ ನಗರಾಭಿವೃದ್ಧಿ ಇಲಾಖೆಯು ಶುಕ್ರವಾರ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದೆ.

ವಕೀಲ ಡಿ.ಎಲ್. ಚಿದಾನಂದ ಮೂಲಕ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ‘ನವೆಂಬರ್ 1ರಂದು ವಾರ್ಡ್ಗಳ ಮರುವಿಂಗಡಣಾ ಪಟ್ಟಿ ಪ್ರಕಟಿಸಲಾಗುವುದು. ನವೆಂಬರ್ 30ಕ್ಕೆ ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಆ ಬಳಿಕ ಪಾಲಿಕೆ ಚುನಾವಣೆ ನಡೆಸಬಹುದು’ ಎಂದು ತಿಳಿಸಿದ್ದಾರೆ.

‘ಅದಕ್ಕೂ ಮುನ್ನವೇ ಈ ಎಲ್ಲ ಪ್ರಕ್ರಿಯೆ ಮುಗಿಸಲು ಪ್ರಯತ್ನಿಸಲಾಗುವುದು. ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಪೀಠದ ಎಲ್ಲ ನಿರ್ದೇಶನಗಳನ್ನು ಪಾಲಿಸಲು ಸಿದ್ಧರಿದ್ದೇವೆ’ ಎಂದು ಅವರು ಹೇಳಿದ್ದಾರೆ. ಈ ಪ್ರಕರಣದ ವಿಚಾರಣೆ ಮುಂದಿನ ಸೋಮವಾರಕ್ಕೆ ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.