ಬೆಂಗಳೂರು: ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಶುಲ್ಕವನ್ನು ವಸೂಲಿ ಮಾಡಿದರೆ, ಅಂತಹ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

‘ಕೆಲವು ಪಿ.ಯು ಕಾಲೇಜುಗಳಲ್ಲಿ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಪದವಿಪೂರ್ವ ಇಲಾಖೆ ನಿರ್ದೇಶಕರ ಜತೆ ಮಾತನಾಡಿದ್ದು, ಎಲ್ಲ ಡಿಡಿಪಿಐಗಳಿಂದ ಮಾಹಿತಿ ಪಡೆದುಕೊಂಡ ಬಳಿಕ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸರ್ಕಾರದ ನಿಯಮಗಳು ಮತ್ತು ಆದೇಶವನ್ನು ಉಲ್ಲಂಘಿಸಿದ್ದು ದೃಢಪಟ್ಟರೆ, ಕಾಯ್ದೆಯ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ. ಖಾಸಗಿ ಶಾಲಾ–ಕಾಲೇಜುಗಳಲ್ಲಿ ಮನಸ್ಸಿಗೆ ಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಕೆಲವು ಪೋಷಕರು ಗಮನಕ್ಕೆ ತಂದಿದ್ದಾರೆ ಎಂದರು.

ಸರ್ಕಾರ ನಿಗದಿ ಮಾಡಿದ ಶುಲ್ಕ ಪ್ರಮಾಣವನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ. ನಮಗೆ ಹೊರೆ ಹೆಚ್ಚುತ್ತದೆ ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆಕ್ಷೇಪ ಎತ್ತಿವೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.