ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಬಿ.ಜಯರಾಮಯ್ಯ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಿರಿಯ ಎಂಜಿನಿಯರ್ ಹುದ್ದೆಗೆ ಶನಿವಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಶಿಫಾರಸು ಪತ್ರದ ಮೇರೆಗೆ ನಗರಾಭಿವೃದ್ಧಿ ಇಲಾಖೆ ಈ ವರ್ಗಾವಣೆ ಮಾಡಿದೆ.

ಜಯರಾಮಯ್ಯ ಅವರು ಈ ಹಿಂದೆ ಪ್ರಾಧಿಕಾರದಲ್ಲಿದ್ದರು. ಅವರ ಸೇವೆಯನ್ನು 2018ರ ನವೆಂಬರ್ 14ರಂದು ಮಾತೃ ಇಲಾಖೆಗೆ ಹಿಂತಿರುಗಿಸಲಾಗಿತ್ತು.

‘ಜಯರಾಮಯ್ಯ ಭ್ರಷ್ಟ ಅಧಿಕಾರಿ. ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅದು ಬಿಟ್ಟು ಪ್ರಾಧಿಕಾರಕ್ಕೆ ಮತ್ತೆ ನೇಮಕ ಮಾಡಿರುವುದು ಸರಿಯಲ್ಲ’ ಎಂದು ದಲಿತ ಮಹಾಸಭಾ ದೂರಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ. ಒಂದು ವೇಳೆ ನೇಮಕ ಹಿಂದಕ್ಕೆ ಪಡೆಯದಿದ್ದರೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗುತ್ತದೆ ಎಂದು ಎಚ್ಚರಿಸಿದೆ.

ಪ್ರಾಧಿಕಾರದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಮುಖ್ಯ ಎಂಜಿನಿಯರ್ ಹುದ್ದೆಗೆ ಭಾರತೀಯ ರೈಲ್ವೆ ಇಲಾಖೆಯ ಪ್ರಧಾನ ಮುಖ್ಯ ಎಂಜಿನಿಯರ್ ಎಂ.ವಿ.ಪ್ರಸಾದ್ ಅವರನ್ನು ನೇಮಕ ಮಾಡಲಾಗಿತ್ತು. ಸಚಿವ ರೇವಣ್ಣ ಶಿಫಾರಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎಂಬ ಆರೋಪ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.