ಬೆಂಗಳೂರು: ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.

’ಆರಂಭದಲ್ಲಿ ಇವರು ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡಪರಿಣಾಮದ ಬಗ್ಗೆಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದುಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆವು. ಈಗ ನಮ್ಮ ಆತಂಕ ನಿಜವಾಗುತ್ತಿದೆ, ಕೊರೊನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿರುವುದಲ್ಲದೆ ವಿತಂಡ ವಾದ ಮಂಡಿಸುತ್ತಿದ್ದಾರೆ‘ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ. ಕೊರೊನಾ ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ, ಸಮಾಜದ ಎಲ್ಲಾ ಜನರೂ, ವಿಶೇಷವಾಗಿ, ಎಲ್ಲಾ ಕ್ಷೇತ್ರದ ಶ್ರಮಿಕ ವರ್ಗದವರೂ ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು ಅವರ ಕ್ಷಮೆ ಕೇಳಬೇಕಾಗಿದೆ ಎಂದು ಸಚಿವರು, ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.