ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುವಾರದಿಂದಲೇ ಬಿಯರ್‌ ದರ ಹೆಚ್ಚಳ ಜಾರಿ

Published 3 ಫೆಬ್ರುವರಿ 2024, 0:33 IST
Last Updated 3 ಫೆಬ್ರುವರಿ 2024, 0:33 IST
ಅಕ್ಷರ ಗಾತ್ರ

ಬೆಂಗಳೂರು: ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇಕಡ 10ರಷ್ಟು ಹೆಚ್ಚಿಸುವ ತೀರ್ಮಾನ ಗುರುವಾರದಿಂದಲೇ ಜಾರಿಯಾಗಿದೆ. ಇದರಿಂದ ಪ್ರತಿ ಬಾಟಲಿ ಬಿಯರ್‌ ದರದಲ್ಲಿ ₹8ರಿಂದ ₹10ರಷ್ಟು ಹೆಚ್ಚಳವಾಗಿದೆ.

ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಮೂಲ ಘೋಷಿತ ದರದ ಶೇಕಡ 185ರಿಂದ ಶೇ 195ಕ್ಕೆ ಏರಿಕೆ ಮಾಡಲು ಅವಕಾಶ ಕಲ್ಪಿಸಿ ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು–2024 ಅನ್ನು ಗುರುವಾರದಿಂದ ಜಾರಿಗೊಳಿಸಲಾಗಿದೆ.

2023ರ ಜುಲೈ ತಿಂಗಳಲ್ಲಿ ಭಾರತೀಯ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 20ರಷ್ಟು ಮತ್ತು ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10ರಷ್ಟು ಹೆಚ್ಚಳ ಮಾಡಲಾಗಿತ್ತು. ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆ ಮಾಡಲಾಗಿದೆ.

ಭಾರತೀಯ ಮದ್ಯದ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT