ಬೆಂಗಳೂರು: ‘ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸಂಸ್ಥೆಯ ಟ್ರೈನಿ ಎಂಜಿನಿಯರ್ಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರುಪರಿಶೀಲಿಸಿ, ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ‘ಬಿಇಎಲ್ ಸಂಸ್ಥೆಯು ಇತ್ತಿಚೆಗೆ ತನ್ನ ಬೆಂಗಳೂರು ಕೇಂದ್ರಕ್ಕೆ ಟ್ರೈನಿ ಎಂಜಿನಿಯರ್ಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಧಿಸೂಚನೆ ಕೇವಲ ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿದೆ. ಸ್ಥಳೀಯ ಕನ್ನಡಿಗರಿಗೆ ಯಾವ ಅವಕಾಶವೂ ದೊರೆಯದ ರೀತಿಯಲ್ಲಿ ಈ ಅಧಿಸೂಚನೆ ಸಿದ್ಧಗೊಂಡಿದೆ’ ಎಂದು ಹೇಳಿದ್ದಾರೆ.

‘ಸಂವಿಧಾನದ ಒಕ್ಕೂಟ ತತ್ವವನ್ನು ಈ ಅಧಿಸೂಚನೆ ಗಾಳಿಗೆ ತೂರಿದೆ. ಬಿಇಎಲ್ ಸಂಸ್ಥೆಗೆ ಬೆಂಗಳೂರು ಮೊದಲಿನಿಂದಲೂ ಪ್ರಮುಖ ಚಟುವಟಿಕೆಯ ಕೇಂದ್ರವಾಗಿದ್ದು, ಸಂಸ್ಥೆಯು ಈ ಮಟ್ಟಕ್ಕೆ ಬೆಳೆಯಲು ಸ್ಥಳೀಯ ಕನ್ನಡಿಗರು ಪ್ರಮುಖ ಕಾರಣಕರ್ತರಾಗಿದ್ದಾರೆ. ಹಾಗಾಗಿ, ಸಮತೋಲಿತ ನೇಮಕಾತಿ ಪ್ರಕ್ರಿಯೆಯು ರಾಷ್ಟ್ರೀಯ ಐಕ್ಯತೆಯನ್ನು ಪ್ರೋತ್ಸಾಹಿಸುತ್ತದೆ. ರಾಜ್ಯಗಳ ನಡುವಿನ ಬಾಂಧವ್ಯವನ್ನೂ ವೃದ್ಧಿಸಲು ಅದು ಸಹಕಾರಿಯಾಗುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.