ಬೆಳಗಾವಿ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 64 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಹೆಚ್ಚಿನ ಸೋಂಕಿತರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಲಾಗಿದೆ. ಕೆಲವರು ಅಂತರ ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಎಲ್ಲರನ್ನೂ ಇಲ್ಲಿನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

9 ಮಂದಿ ಸೋಂಕಿತರು ತೀವ್ರ ನಿಗಾ (ಐಸಿಯು) ಘಟಕದಲ್ಲಿದ್ದಾರೆ.

ಕೆಲವು ದಿನಗಳ ಹಿಂದೆ ಕಂಟೈನ್ಮೆಂಟ್ ಝೋನ್‌ನಿಂದ ಮುಕ್ತಿ ಪಡೆದಿದ್ದ ರಾಯಬಾಗ ತಾಲ್ಲೂಕಿನ ಚಿಂಚಲಿಯಲ್ಲಿ ಮತ್ತೆ ಸೋಂಕು ಹರಡಿದೆ. ಬೆಳಗಾವಿ ನಗರ ಹಾಗೂ ತಾಲ್ಲೂಕಿನ ವಿವಿಧ ಹಳ್ಳಿಗಳಿಗೂ ವ್ಯಾಪಿಸಿದೆ.

ಸೋಂಕಿತರಲ್ಲಿ ಅಥಣಿ ತಾಲ್ಲೂಕಿನ ನಂದಗಾಂವ, ನದಿಇಂಗಳಗಾಂವ, ಆಥಣಿ ಪಟ್ಟಣ ಮೊದಲಾಡೆಯ 7, ರಾಯಬಾಗ ತಾಲ್ಲೂಕಿನ ಕುಡಚಿ, ಬೊಮ್ಮನಾಳ, ಚಿಂಚಲಿ, ಕುಡಚಿ ಪಟ್ಟಣ ಮೊದಲಾದ ಕಡೆಗಳ 20, ಚಿಕ್ಕೋಡಿಯ ಒಬ್ಬರು, ಬೆಳಗಾವಿ ನಗರದ ವಿವಿಧೆಡೆಯ ಹಾಗೂ ತಾಲ್ಲೂಕಿನ ವಿವಿಧ ಹಳ್ಳಿಗಳ 28, ಬೈಲಹೊಂಗಲ ತಾಲ್ಲೂಕಿನ 6, ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಹಾಗೂ ರಾಮದುರ್ಗ ತಾಲ್ಲೂಕಿನ ಚಿಕ್ಕೊಪ್ಪದ ತಲಾ ಒಬ್ಬರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.