ಬೆಳಗಾವಿ: ‘ಸೈಬರ್ ಅಪರಾಧ ಪ್ರಕರಣಗಳ ತನಿಖೆಗಾಗಿ ಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಸಿಇಎನ್ ವಿಭಾಗವನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. ಇದು ದೇಶದಲ್ಲೇ ಮೊದಲು’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

‘ಈ ಪ್ರಕರಣಗಳಲ್ಲಿ ವಂಚನೆಗೆ ಒಳಗಾಗಿದ್ದ ಸಾವಿರಾರು ಕೋಟಿ ರೂಪಾಯಿ ವಶಕ್ಕೆ ಪಡೆದಿದ್ದೇವೆ. ಆದರೆ, ಬೇರೆ ಬೇರೆ ದೇಶಗಳಲ್ಲಿ ನೆಲೆಸಿರುವ ಆರೋಪಿಗಳನ್ನು ಬಂಧಿಸುವುದು ಸವಾಲಾಗಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಸೈಬರ್ ವಂಚನೆ ಪ್ರಕರಣಗಳ ತನಿಖೆಯಲ್ಲಿ ತಾಂತ್ರಿಕ ಸವಾಲುಗಳು ಮುನ್ನೆಲೆಗೆ ಬರುತ್ತಿವೆ. ಹೀಗಾಗಿ ಡಿಜಿಪಿ ಶ್ರೇಣಿಯ ಅಧಿಕಾರಿ ನೇತೃತ್ವದಲ್ಲಿ ಹೊಸ ವಿಭಾಗ ರಚಿಸಿದ್ದೇವೆ. ವಂಚನೆಗೆ ಒಳಗಾದ ಹಣವನ್ನು ವಸೂಲಿ ಮಾಡುವಾಗ ಭಾರತೀಯ ರಿಸರ್ವ್ ಬ್ಯಾಂಕ್ನ ಮಾರ್ಗಸೂಚಿ ಅನುಸರಿಸಬೇಕು. ನಾವು ಬ್ಯಾಂಕ್ನವರ ಜೊತೆಗೂ ಸಮನ್ವಯ ಸಭೆಗಳನ್ನು ನಡೆಸುತ್ತಿದ್ದೇವೆ’ ಎಂದರು.

‘ಔರಾದ್ಕರ್ ಆಯೋಗದ ವರದಿ ಶಿಫಾರಸುಗಳ ಪ್ರಕಾರ, ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗುತ್ತಿದೆ. ಅವರ ಫಿಟ್ನೆಸ್, ಸಂಬಳ, ಟಿಎ-ಡಿಎ ಪರಿಷ್ಕರಣೆಗೆ ಕ್ರಮ ವಹಿಸಲಾಗಿದೆ. ನೇಮಕಾತಿ ವೇಳೆ ಪೊಲೀಸರಿಗೆ ತರಬೇತಿ ಕಾರ್ಯಕ್ರಮಗಳನ್ನು ಆಧುನಿಕ ಅಗತ್ಯಗಳಿಗೆ ಅನುಗುಣವಾಗಿ ಬದಲಾಯಿಸಲಾಗಿದೆ. ಅವರಿಗೆ ಸಂವಿಧಾನ, ಕಂಪ್ಯೂಟರ್ಗಳ ತರಬೇತಿ, ಹೊಸ ಬಿಎನ್ಎಸ್ ಕಾನೂನುಗಳು ಮತ್ತು ದೈಹಿಕ ತರಬೇತಿಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-21-1625099978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.