ಉಗರಗೋಳ (ಬೆಳಗಾವಿ ಜಿಲ್ಲೆ): ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಬುಧವಾರ ಹುಂಡಿ ಎಣಿಕೆ ಪೂರ್ಣಗೊಂಡಿದ್ದು, 61 ದಿನಗಳ ಅವಧಿಯಲ್ಲಿ ₹1.68 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.

2023ರ ನವೆಂಬರ್ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಹುಂಡಿಯಲ್ಲಿ ಹಾಕಿರುವ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಎಣಿಸಲಾಯಿತು. ಈ ಬಾರಿ ₹ 1.39 ಕೋಟಿ ನಗದು, ₹ 25.72 ಲಕ್ಷ ಮೌಲ್ಯದ ಚಿನ್ನಾಭರಣ, ₹ 3.28 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.

ಇದರೊಂದಿಗೆ ಕೀನ್ಯಾ, ಸಿಂಗಾಪುರ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೆಟ್ಸ್ ಮತ್ತಿತರ ದೇಶಗಳ ಕರೆನ್ಸಿಗಳು ಹುಂಡಿಯಲ್ಲಿ ಪತ್ತೆಯಾಗಿವೆ.

ಕರ್ನಾಟಕ ಮಾತ್ರವಲ್ಲದೆ; ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಯಲ್ಲಮ್ಮ ದೇವಿ ಸನ್ನಿಧಿಗೆ ಆಗಮಿಸುತ್ತಾರೆ. ತಮ್ಮ ಆರ್ಥಿಕ ಶಕ್ತಿಗೆ ಅನುಗುಣವಾಗಿ ದೇವಿಗೆ ಕಾಣಿಕೆ ಅರ್ಪಿಸಿ ಭಕ್ತಿ ಮೆರೆಯುತ್ತಾರೆ.

ಯಲ್ಲಮ್ಮ ದೇವಸ್ಥಾನ, ಜಿಲ್ಲಾಧಿಕಾರಿ ಕಚೇರಿ, ಧಾರ್ಮಿಕ ದತ್ತಿ ಇಲಾಖೆ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮೂರು ಹಂತಗಳಲ್ಲಿ ಹುಂಡಿ ಎಣಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.