‘ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ’
ಕನ್ನಡದ ವಿಚಾರಕ್ಕೆ ಎಂಇಎಸ್ ಕಾರ್ಯಕರ್ತರು ಬಂದರೆ ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಮರಾಠರ ಜಾಗದಲ್ಲೇ ಅವರಿಗೆ ಉತ್ತರ ಕೊಡುತ್ತೇವೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಎಚ್ಚರಿಕೆ ನೀಡಿದರು. ‘ಕರ್ನಾಟಕದ ನೀರು ಗಾಳಿ ಅನ್ನ ತಿಂದು ಮತ್ತೊಂದು ಭಾಷೆಯ ಬಗ್ಗೆ ಬಹಳ ಪ್ರೀತಿ ವ್ಯಾಮೋಹ ತೋರಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಎಂಇಎಸ್ ಕಾರ್ಯಕರ್ತರ ವರ್ತನೆ ಇದೇ ರೀತಿ ಮುಂದುವರಿದರೆ ಗೂಂಡಾ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಬೇಕಾಗುತ್ತದೆ’ ಎಂದರು.