ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಲೋಕಸಭಾ ಉಪ ಚುನಾವಣೆ: ಲಿಂಗಾಯತ ಸಮಾಜದ ಬೆಂಬಲ ಕೋರಿದ ಮಂಗಲಾ ಅಂಗಡಿ

Last Updated 28 ಮಾರ್ಚ್ 2021, 6:52 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು, ನಗರದಲ್ಲಿ ಲಿಂಗಾಯತ ಸಂಘಟನೆ ಸದಸ್ಯರೊಂದಿಗೆ ಭಾನುವಾರ ಸಭೆ ನಡೆಸಿದರು.

‘ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಉಪ ಚುನಾವಣೆಯಲ್ಲಿ ಸಮುದಾಯದ ಸಂಪೂರ್ಣ ಬೆಂಬಲ ಹಾಗೂ ಸಹಕಾರವನ್ನು ನನಗೆ ನೀಡಬೇಕು’ ಎಂದು ಕೋರಿದರು.

‘ಪತಿಯಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಅವುಗಳನ್ನು ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಅಧ್ಯಕ್ಷ ಈರಣ್ಣ ದಾಯಣ್ಣನವರ, ಉಪಾಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಬೆಳಗಾವಿ ನಗರಾಭಿವೃದ್ಧಿ ‍ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ, ಮುಖಂಡರಾದ ಸಂಗಪ್ಪ ಬ್ಯಾಳಿ, ಸುರೇಶ ನರಗುಂದ, ಶಶಿಭೂಷಣ ಪಾಟೀಲ, ರಮೇಶ್ ಟಿ., ಗಜೇಂದ್ರ ಶೇಡಬಾಳ, ಶಶಿ ಪಾಟೀಲ, ಸದಾಶಿವ ದೇವರಮನಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT