ಬೆಳಗಾವಿ: ‘ಜನರ ಸಮಸ್ಯೆಗಳ ಕುರಿತಾಗಿ ಸಂಸತ್ತಿನಲ್ಲಿ ಕೇಂದ್ರದ ಗಮನಸೆಳೆಯಲು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ದೆಹಲಿಗೆ ಹೋಗಬೇಕಿದ್ದ ಕಾಂಗ್ರೆಸ್ನ ಶಾಸಕರು, ಈಗ ಸಚಿವ ಸ್ಥಾನ ಪಡೆಯುವುದಕ್ಕಾಗಿ ದೆಹಲಿ ಚಲೋ ಮಾಡುತ್ತಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್ ಲೇವಡಿ ಮಾಡಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಜಗಳ ಇನ್ನೂ ಮುಂದುವರಿದಿದೆ. ದೊಡ್ಡ ಚರ್ಚೆಯಾಗಿ ಅದು ಮಾರ್ಪಟ್ಟಿದ್ದು, ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಅಧಿಕಾರ ಹಂಚಿಕೆ ವಿಚಾರವಾಗಿ ಏನು ಒಪ್ಪಂದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಮ್ಮೆ ಹೇಳಿ ಬಿಡಬೇಕು’ ಎಂದರು.

'ಯುದ್ಧದ ಕಾರಣಕ್ಕೆ ಭಾರತದಲ್ಲಿ ಸಮಸ್ಯೆಯಾಗಿಲ್ಲ. ಪೆಟ್ರೊಲ್, ಡಿಸೇಲ್ ಕೊರತೆಯೂ ಆಗಿಲ್ಲ. ಒಂದುವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿಯಂತ್ರಿಸಲು ಆಗುತ್ತಿರಲಿಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-1633922101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.