ಬೆಳಗಾವಿ: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಅನೇಕ ಸಮಸ್ಯೆಗಳಿವೆ. ಅಂತಹ ಸಮಸ್ಯೆಗಳನ್ನು ಆಯೋಗವು ಆಲಿಸಿ ಪರಿಹಾರ ಒದಗಿಸಲು ಕಟ್ಟುನಿಟ್ಟಿನ ಕ್ರಮವಹಿಸಲಿದೆ’ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎಲ್. ಮೂರ್ತಿ ಹೇಳಿದರು.

ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ ಜರುಗಿದ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಂಘ–ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಸರ್ಕಾರದಿಂದ ಬರುವ ಸವಲತ್ತುಗಳು ಪರಿಶಿಷ್ಟ ವರ್ಗದವರಿಗೆ ದೊರಕಬೇಕು. ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ಸಂಬಂಧಿಸಿದಂತೆ ಸ್ಥಳ ಮಂಜೂರು ಮಾಡಲು ಆಯೋಗದಿಂದ ಪತ್ರ ಬರೆಯಲಾಗಿದೆ. ಜಮೀನು ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಈ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಜರುಗಿಸಿ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗುವುದು’ ಎಂದು ತಿಳಿಸಿದರು.

ಫಲಕ ಅಳವಡಿಕೆಗೆ ಸೂಚನೆ: ‘ಪರಿಶಿಷ್ಟರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬಿಸದಂತೆ ಆದೇಶ ಹೊರಡಿಸಲಾಗಿದೆ. ಎಸ್.ಸಿ.ಪಿ., ಟಿ.ಎಸ್.ಪಿ ಅನುದಾನದಲ್ಲಿ ಕೈಗೊಳ್ಳಲಾದ ಕಾಮಗಾರಿಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳುಳ್ಳ ಮಾಹಿತಿ ಫಲಕ ಅಳವಡಿಸಲು ಆದೇಶ ಹೊರಡಿಸಲಾಗುವುದು. ಮಕ್ಕಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಪತ್ರ ಬರೆಯಲಾಗಿದೆ. ಕಾಡಂಚಿನಲ್ಲಿ ವಾಸಿಸುವ ಜನರಿಗೆ ದೊರಕಬೇಕಾದ ಮೂಲಭೂತ ಸೌಲಭ್ಯ ಹಾಗೂ ಅವರ ಹಕ್ಕುಗಳನ್ನು ಒದಗಿಸಲು ಚರ್ಚಿಸಿ ಕ್ರಮ ಜರುಗಿಸಲಾಗುವುದು’ ಎಂದರು.

ಸಮಾಜದ ಮುಖಂಡ ದುರ್ಗೇಶ ಮೇತ್ರಿ ಮಾತನಾಡಿ, ‘ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆಯ ಅಧೀನದಲ್ಲಿನ ವಸತಿ ನಿಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ‘ಡಿ’ ದರ್ಜೆ ಸಿಬ್ಬಂದಿ ನೇಮಕಾತಿ ಮಾಡಬೇಕು. ಭೂ ಒಡೆತನ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕುವಂತಾಗಬೇಕು’ ಎಂದು ಸಭೆಗೆ ತಿಳಿಸಿದರು.

ಮಲ್ಲಿಕಾರ್ಜುನ ರಾಶಿಂಗೆ ಮಾತನಾಡಿ, ‘ಕಿತ್ತೂರು ಹಾಗೂ ಕಣಗಲಾ ಕೈಗಾರಿಕಾ ಪ್ರದೇಶದಲ್ಲಿ ಪರಿಶಿಷ್ಟರಿಗೆ ಒದಗಿಸುವ ಪ್ರದೇಶವು ಕೈಗಾರಿಕೆಗಳ ಸ್ಥಾಪನೆಗೆ ಸೂಕ್ತವಾಗಿಲ್ಲ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಸ್ಮಶಾನ ಭೂಮಿ ದಾಖಲೆಗಳಲ್ಲಿ ನಮೂದಾಗಿದ್ದರು ಸಹ ಸ್ಮಶಾನ ಭೂಮಿ ಇದುವರೆಗೂ ಹಸ್ತಾಂತರಿಸಲಾಗಿಲ್ಲ. ವಿವಿಧ ಕಾಮಗಾರಿಗಳ ಗುತ್ತಿಗೆ ಪರಿಶಿಷ್ಟರಿಗೆ ಇದುವರೆಗೂ ದೊರಕುತ್ತಿಲ್ಲ. ಈ ಕುರಿತು ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು. ಬ್ಯಾಂಕುಗಳಲ್ಲಿ ಸಾಲ ಪಡೆಯಲು ಸರಳೀಕರಣವಾಗಬೇಕು. ಕುಂದುಕೊರತೆ ಸಭೆಗಳ ಮೂಲಕ ನೊಂದವರಿಗೆ ನ್ಯಾಯ ದೊರಕುವಂತಾಗಬೇಕು’ ಎಂದು ತಿಳಿಸಿದರು.

ದೀಪಕ ವಾಗೆಲ್ ಮಾತನಾಡಿ, ‘ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ವಸತಿ ಸಮುಚ್ಛಯಗಳಲ್ಲಿ ವಾಸಿಸುವವರಿಗೆ ಹಕ್ಕುಪತ್ರ ವಿತರಣೆಯಾಗಬೇಕು. ಮ್ಯಾನುವಲ್ ಸ್ಕ್ಯಾವೇಂಜರುಗಳಿಗೆ ಗುರುತಿನ ಪತ್ರ ವಿತರಣೆ ಹಾಗೂ ಸರಿಯಾದ ಸಮಯಕ್ಕೆ ಸಂಬಳ ದೊರಕುವಂತಾಗಬೇಕು’ ಎಂದರು.

ರಾಜು ಕಾಳೇನಟ್ಟಿ, ಪ್ರಕಾಶ ಮೈಲಾಚೆ, ಮಹಾದೇವ ತಳವಾರ ಮಾತನಾಡಿದರು. ಹಕ್ಕುಪತ್ರ ವಿರಣೆ, ಕಾಂಚಿನಲ್ಲಿ ವಾಸಿಸುವ ಜನರ ಸಮಸ್ಯೆ ಹಾಗೂ ಮೂಲ ಸೌಲಭ್ಯ, ಶಿಕ್ಷಣ, ಪರಿಶಿಷ್ಟರ ಮೇಲೆ ಪೊಲೀಸ್ ಠಾಣೆಗಳಲ್ಲಿ ಸುಳ್ಳು ಪ್ರಕರಣಗಳ ದಾಖಲೆ, ಜಿಲ್ಲಾಮಟ್ಟದಲ್ಲಿ ಗ್ರಂಥಾಲಯ ಸ್ಥಾಪನೆ, ಮನರೇಗಾ ಯೋಜನೆಯಡಿ ಅಕ್ರಮ, ಪೋಲಿಸ್ ಠಾಣೆಗಳಲ್ಲಿ ನಿಯಮಿತವಾಗಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ಆಯೋಜನೆ, ಕೆಲ ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚುವರಿ ಪ್ರವೇಶ ಶುಲ್ಕ ಆಕರಣೆ, ಪರಿಶಿಷ್ಟ ಜಾತಿ, ವೃತ್ತಿಪರ ಕೋರ್ಸ್ಗಳ ತರಬೇತಿ ಆಯೋಜನೆ, ಕೊರವ ಸಮಾಜಕ್ಕೆ ಸಮುದಾಯ ಭವನಗಳ ನಿರ್ಮಾಣ, ವಸತಿ ನಿಲಯಗಳಲ್ಲಿ ಉತ್ತಮ ಅಹಾರ ಪೂರೈಕೆ ಸೇರಿದಂತೆ ವಿವಿದ ವಿಷಯಗಳ ಕುರಿತು ಅಹವಾಲುಗಳನ್ನು ಸಲ್ಲಿಸಲಾಯಿತು.

ಆಯೋಗದ ಸದಸ್ಯರಾದ ದಿವಾಕರ ಎನ್, ಸುನೀಲ ಉಕ್ಕಲಿ, ಗೀತಾ ಥಾವಂಶಿ, ಕಾರ್ಯದರ್ಶಿ ಶಿವರಾಮು ಎಚ್.ಎಸ್. ಸಂಶೋಧನಾ ಅಧಿಕಾರಿ ಸಿಂಧೂ ಎಚ್.ಎಸ್. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-21-8951546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.