ಬೆಳಗಾವಿ: ‘ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಗೊಂದಲ ಮುಂದುವರಿದಿದೆ. ಆದರೆ, ಪ್ರಮುಖ ವಿರೋಧ ಪಕ್ಷವಾಗಿ ನಾವು ವಿಧಾನಸಭೆಯಲ್ಲಿ ಸರ್ಕಾರವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿಲ್ಲ’ ಎಂಬ ಅಸಮಾಧಾನ ಬಿಜೆಪಿ ಶಾಸಕರಿಂದಲೇ ವ್ಯಕ್ತವಾಗಿದೆ.

‘ಸಾಕಷ್ಟು ಜ್ವಲಂತ ಸಮಸ್ಯೆಗಳು, ವಿವಾದಗಳು ಇದ್ದರೂ ಮುಂದಿನ ಸಾಲಿನ ನಾಯಕರ ‘ರಕ್ಷಣಾತ್ಮಕ ಆಟ’ ಸರಿಯಲ್ಲ. ಉತ್ತರಕರ್ನಾಟಕದ ಕುರಿತ ಚರ್ಚೆ ಆರಂಭವಾಗಿದ್ದರೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಸಚಿವರ ವಾಗ್ದಾಳಿಗೆ ಮುಂದಿನ ಸಾಲಿನ ನಾಯಕರು ದಿಟ್ಟವಾಗಿ ಉತ್ತರ ನೀಡುತ್ತಿಲ್ಲ’ ಎಂಬ ಬೇಸರ ಶಾಸಕರಲ್ಲಿ ಮನೆ ಮಾಡಿದೆ.

‘ಕಬ್ಬು–ಮೆಕ್ಕೆ ಜೋಳ ಬೆಳೆಗಾರರ ಸಮಸ್ಯೆ, ಮಳೆ ಮತ್ತು ಪ್ರವಾಹದಿಂದ ಉಂಟಾದ ನಷ್ಟಕ್ಕೆ ಸೂಕ್ತ ಪರಿಹಾರ ನೀಡದೇ ಇರುವುದು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಸೇರಿ ವಿವಿಧ ನೀರಾವರಿ ಯೋಜನೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಮಾಡದೇ ಇರುವ ವಿಷಯವನ್ನು ಉತ್ತರಕರ್ನಾಟಕದ ಸಮಸ್ಯೆಗಳ ಚರ್ಚೆಯಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ, ಇದನ್ನೇ ಪ್ರಧಾನ ಅಸ್ತ್ರವಾಗಿ ಬಳಸಲು ಇನ್ನೂ ಸಾಧ್ಯವಾಗಿಲ್ಲ. ಎರಡನೇ ವಾರದಲ್ಲಾದರೂ ಈ ಕುರಿತು ಚರ್ಚೆ ಪರಿಣಾಮಕಾರಿಯಾಗಿ ನಡೆಯುತ್ತದೆಯೇ’ ಎಂಬ ಸಂಶಯ ಶಾಸಕರದು.

‘ಕಾಂಗ್ರೆಸ್ನ ನಾಯಕತ್ವ ಬದಲಾವಣೆ ವಿಷಯವನ್ನು ಅಶೋಕ ಅವರು ತಮ್ಮ ಭಾಷಣದ ಮಧ್ಯೆ ಪ್ರಸ್ತಾಪಿಸಿದ್ದಾರೆ. ಸೋಮವಾರದ ಬಳಿಕವಾದರೂ ಈ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲು ಅವಕಾಶ ಬಳಸಿಕೊಳ್ಳಬೇಕು. ಕಳೆದ ವಾರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣದ ಸದಸ್ಯರು ಬಹಿರಂಗ ಹೇಳಿಕೆಗಳ ಮೂಲಕ ಪರಸ್ಪರ ಕಿಡಿ ಹೊತ್ತಿಸಿದ್ದರು. ಔತಣ ಕೂಟಗಳ ಸಭೆಯೂ ನಡೆದಿತ್ತು. ಇದನ್ನು ಅಸ್ತ್ರವಾಗಿ ಪ್ರಯೋಗಿಸಬೇಕು’ ಎನ್ನುತ್ತಾರೆ ಶಾಸಕರು.

ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಸೇರಿ ನೀರಾವರಿಯ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಬಿಜೆಪಿ– ಜೆಡಿಎಸ್ ಪ್ರಸ್ತಾಪಿಸಲಿವೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರ ಸಿಗುತ್ತಿಲ್ಲ ಎಂಬ ಸಿದ್ಧ ಅಸ್ತ್ರವನ್ನು ಸರ್ಕಾರ ತನ್ನ ಬತ್ತಳಿಕೆಯಲ್ಲಿ ಇಟ್ಟುಕೊಂಡಿದೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅದರಲ್ಲೂ ಪೊಲೀಸರೇ ಅಪರಾಧ ಕೃತ್ಯದಲ್ಲಿ ತೊಡಗಿರುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ಪ್ರಸ್ತಾಪಿಸಲಾಗುವುದು’ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಆದರೆ, ಇದಕ್ಕೆ ಪ್ರತಿಯಾಗಿ ಆಳಂದದಲ್ಲಿ ಮತಕಳ್ಳತನದ ಎಸ್ಐಟಿ ವರದಿಯನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆಯನ್ನು ಬಿಜೆಪಿ–ಜೆಡಿಎಸ್ ಪಕ್ಷಗಳು ವಿರೋಧಿಸಲು ತೀರ್ಮಾನಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.