ಬೆಂಗಳೂರು: ‘ಬೆಳಗಾವಿ ಅಧಿವೇಶನವನ್ನು ಕನಿಷ್ಠ 20 ದಿನ ನಡೆಸಬೇಕು. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಅವಕಾಶ ನೀಡಬೇಕು’ ಎಂದು ಬಿಜೆಪಿ ಮತ್ತು ಜೆಡಿಎಸ್ ಆಗ್ರಹಿಸಿವೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ಶನಿವಾರ ನಡೆಯಿತು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘10 ದಿನ ಅಧಿವೇಶನ ನಡೆಸಲು ಸರ್ಕಾರವು ಸಿದ್ಧತೆ ಮಾಡಿಕೊಂಡಿದೆ. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ 10–12 ಗಂಭೀರ ಸಮಸ್ಯೆಗಳು ಇದ್ದು, ಅವುಗಳ ಚರ್ಚೆಗೆ ಇಷ್ಟು ಕಡಿಮೆ ಅವಧಿ ಸಾಲುವುದಿಲ್ಲ. ಹೀಗಾಗಿ 20 ದಿನವಾದರೂ ಅಧಿವೇಶನ ನಡೆಸಬೇಕು’ ಎಂದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ‘ಕಾಟಾಚಾರಕ್ಕಾಗಿ ಈ ಅಧಿವೇಶನ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ಬೆಳಗಾವಿ ಅಧಿವೇಶನ ಆರಂಭಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರವು ಅಲ್ಲಿಯೂ ಬೆಂಗಳೂರಿನ ಸಮಸ್ಯೆಗಳನ್ನೇ ಚರ್ಚೆಗೆ ಎತ್ತಿಕೊಳ್ಳುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರದ ದುರಾಡಳಿತ, ಹಗರಣಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಿವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ, ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಅವಘಡದ ವಿಚಾರದಲ್ಲಿ ಎರಡೂ ಪಕ್ಷದ ಶಾಸಕರು, ಸದಸ್ಯರು ಒಗ್ಗಟ್ಟಿನಿಂದ ಹೋರಾಡಿದ್ದಾರೆ. ನಮ್ಮ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮುಂದೆಯೂ ಇರುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2028ರ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕು ಎಂದು ಪಕ್ಷದ ನಾಯಕರು ಕರೆ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಎರಡೂ ಪಕ್ಷದ ನಾಯಕರು ಉತ್ತರಿಸಲು ನಿರಾಕರಿಸಿದರು. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುವ ಬಗ್ಗೆ ಕೇಳಿದ ಪ್ರಶ್ನೆಗೂ ಪ್ರತಿಕ್ರಿಯೆ ನೀಡಲಿಲ್ಲ.

ನಗರದ ಏಟ್ರಿಯಾ ಹೋಟೆಲ್ನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ಎನ್. ರವಿಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು, ಎಸ್.ಎಲ್ ಬೋಜೇಗೌಡ, ನಿಖಿಲ್ ಕುಮಾರಸ್ವಾಮಿ, ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.