ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಾಗೃಹದಿಂದ ಪರಾರಿಯಾದ ಕೈದಿ ನಾಲ್ಕು ದಿನವಾದರೂ ಸುಳಿವಿಲ್ಲ!

ಕರ್ತವ್ಯ ಲೋಪ: ಜೈಲರ್ ಸೇರಿ ನಾಲ್ವರ ಅಮಾನತು
Last Updated 26 ಏಪ್ರಿಲ್ 2019, 20:06 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಕೈದಿ, ಮುರುಗೇಶ ಅಲಿಯಾಸ್ ಮುರುಗ ಅಲಿಯಾಸ್ ಕಣ್ಣಮುಚ್ಚಿಯ ಸುಳಿವು ನಾಲ್ಕು ದಿನಗಳಾದರೂ ಸಿಕ್ಕಿಲ್ಲ.

ಈ ಕೈದಿ, ಜೈಲಿನಿಂದ ಸೋಮವಾರ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾನೆ. ಐವರನ್ನು ವಿಕೃತವಾಗಿ ಕೊಚ್ಚಿ ಕೊಲೆ ಮಾಡಿದ್ದ ಈತನಿಗೆ ಚಾಮರಾಜನಗರ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ಆತನ ಸುಳಿವು ನೀಡಿದವರಿಗೆ ನಗದು ಬಹುಮಾನ ಕೊಡುವುದಾಗಿ ಕಾರಾಗೃಹ ಇಲಾಖೆ ತಿಳಿಸಿದೆ. ಈ ನಡುವೆ, ಕರ್ತವ್ಯಲೋಪ ಆರೋಪದ‌ ಮೇಲೆ ಜೈಲರ್ ಸುಷ್ಮಾ ಶಹಾಪುರಕರ, ಎಎಸ್ಐ ಹಾಗೂ ಇಬ್ಬರು ಕಾನ್ಸ್‌ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ.

‘ಕೈದಿ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಆತ ತಮಿಳುನಾಡಿನವನಾದ್ದರಿಂದ ಆ ಕಡೆಗೆ ಹೋಗಿರ
ಬಹುದು. ಹೀಗಾಗಿ ಆ ಕಡೆಗೆ ಹಾಗೂ ಗೋವಾ, ಮಹಾರಾಷ್ಟ್ರ, ಬೆಂಗಳೂರು ಕಡೆಗೆ ತಂಡಗಳು ತೆರಳಿವೆ.’ ಎಂದು ಹಿಂಡಲಗಾ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಟಿ.ಪಿ. ಶೇಷ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT