ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ‘ಕೈ’ ಟಿಕೆಟ್‌ಗೆ ಕಾತರಕಿ ಲಾಬಿ -ಡಿಕೆಶಿಗೆ ಪತ್ರ

Published 18 ಜನವರಿ 2024, 14:08 IST
Last Updated 18 ಜನವರಿ 2024, 14:08 IST
ಅಕ್ಷರ ಗಾತ್ರ

ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮೋಹನ್‌ ಕಾತರಕಿ ಲಾಬಿ ನಡೆಸಿದ್ದಾರೆ. ತಮ್ಮನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. 

34 ವರ್ಷಗಳಿಂದ ಸುಪ್ರೀಂ ಕೋರ್ಟ್‌ನ ವಕೀಲರಾಗಿರುವ ಅವರು, ಕಾವೇರಿ, ಕೃಷ್ಣಾ ಹಾಗೂ ಮಹದಾಯಿ ಜಲವಿವಾದಗಳಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ್ದಾರೆ. 

‘ನಾನು 1985ರಿಂದಲೂ ಕಾಂಗ್ರೆಸ್‌ ಪಕ್ಷದ ಜತೆಗೆ ನಂಟು ಹೊಂದಿದ್ದು, ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಗೆಲುವಿನ ಸಾಧ್ಯತೆ ಹೆಚ್ಚು. ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಸಿದ್ಧ’ ಎಂದು ಅವರು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT