ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನ್ಯಾಯಾಲಯದ ಮೇಲಿನ ವಿಶ್ವಾಸ ಹೆಚ್ಚಾಗಿದೆ: ಡಿ.ಕೆ. ಶಿವಕುಮಾರ್ 

Published 29 ಆಗಸ್ಟ್ 2024, 15:59 IST
Last Updated 29 ಆಗಸ್ಟ್ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ‘ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದೇನೆ ಎಂಬ ಆರೋಪದ ತನಿಖೆಯನ್ನು ಸಿಬಿಐ ಬದಲು ಲೋಕಾಯುಕ್ತಕ್ಕೆ ವಹಿಸಿದ್ದ ರಾಜ್ಯ ಸರ್ಕಾರದ ತೀರ್ಮಾನವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ನ್ಯಾಯಾಲಯದ ಮೇಲಿನ ವಿಶ್ವಾಸ ಹೆಚ್ಚಾಗಿದೆ’ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.  

‘ನನ್ನ ವಿರುದ್ಧದ ಪ್ರಕರಣವನ್ನು ತನಿಖೆ ಮಾಡಬಾರದು ಎಂದು ರಾಜ್ಯ ಸರ್ಕಾರ ಹೇಳಿಲ್ಲ. ಸಿಬಿಐ ಬದಲು ಲೋಕಾಯುಕ್ತ ತನಿಖೆಗೆ ವಹಿಸಲು ತೀರ್ಮಾನ ಮಾಡಿತ್ತು. ಅರ್ಧ ತನಿಖೆ ಮುಗಿದಿದೆ ಎಂದು ಸಿಬಿಐ ಹೇಳಿತ್ತು. ನೋಟಿಸ್‌ ಕೊಟ್ಟಿದ್ದು ಬಿಟ್ಟರೆ ಏನೂ ಮಾಡಿಲ್ಲ. ಇ.ಡಿಯಿಂದಾಗಿ ತಿಹಾರ್ ಜೈಲಿಗೂ ಹೋಗಿ ಬಂದೆ. ಆ ಪ್ರಕರಣವೂ ವಜಾ ಆಯಿತು. ಅನಗತ್ಯ ತೊಂದರೆ ಕೊಡುವ ಕೆಲಸ ಕೊನೆಗೂ ಮುಗಿಯುತ್ತಾ ಬಂದಿದೆ. ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು, ಬಿಡುವುದು ಸಿಬಿಐಗೆ ಬಿಟ್ಟದ್ದು. ಕಾನೂನು ಹೋರಾಟ ಮುಂದುವರಿಸುವೆ’ ಎಂದು ಹೇಳಿದರು. 

ಸುಪ್ರೀಂಕೋರ್ಟ್‌ಗೆ ಮೆಲ್ಮನವಿ ಸಲ್ಲಿಸುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌  ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯತ್ನಾಳ್‌ಗೂ ಇದಕ್ಕೂ ಏನು ಸಂಬಂಧ? ಸಿಬಿಐ ಸಹ ಒಂದು ಪೊಲೀಸ್‌ ಠಾಣೆ ಅಷ್ಟೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ಮಾಡಬೇಕಷ್ಟೇ’ ಎಂದರು.

‘ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದ  ವಿರೋಧಿಗಳು ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡುತ್ತಲೇ ಇದ್ದಾರೆ. ಅಂತಹ ಪ್ರಯತ್ನಗಳನ್ನು ಕಾನೂನು ಹೋರಾಟದ ಮೂಲಕ ಎದುರಿಸುತ್ತೇವೆ’ ಎಂದು ಹೇಳಿದರು.

ಭ್ರಷ್ಟಾಚಾರದ ವಿರುದ್ಧದ ಸಮರ ಇಲ್ಲಿಗೇ ನಿಲ್ಲದು. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಹೈಕೋರ್ಟ್‌ ತೀರ್ಪನ್ನು ಗೌರವಿಸುತ್ತಲೇ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ.
ಬಸನಗೌಡ ಪಾಟೀಲ ಯತ್ನಾಳ್, ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT