ಬೆಂಗಳೂರು: ಬಾಣಂತಿಯರ ಸಾವಿನ ಪ್ರಕರಣಗಳಲ್ಲಿ ಕಳಪೆ ಗುಣಮಟ್ಟದ ಐವಿ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಮತ್ತು ರಾಜ್ಯ ಔಷಧ ಪೂರೈಕೆ ನಿಗಮದ ಕಾಯಕಲ್ಪ ನಡೆಸಬೇಕು ಎಂಬ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆಯಲ್ಲಿ ಬೆಂಬಲ ವ್ಯಕ್ತವಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ಪ್ರಸ್ತಾಪಿಸಿದರು. ಪ್ರಕರಣಗಳ ವಿವರಗಳು ಮತ್ತು ಈವರೆಗಿನ ಕ್ರಮಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ‘ಸಂಬಂಧಿತ ಕಂಪನಿಯ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಸಂಪುಟ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ದಿನೇಶ್ ಗುಂಡೂರಾವ್, ‘ಔಷಧ ಸರಬರಾಜು ನಿಗಮಕ್ಕೆ ಕಾಯಕಲ್ಪದ ಅಗತ್ಯವಿದೆ. ಗುಣಮಟ್ಟದ ಔಷಧಗಳನ್ನು ಪೂರೈಸುವಂತಹ ದೊಡ್ಡ ಕಂಪನಿಗಳು ನಿಗಮ ಕರೆಯುವ ಟೆಂಡರ್ಗಳಲ್ಲಿ ಭಾಗಿಯಾಗುವಂತೆ ಮಾಡಬೇಕಿದೆ. ಈ ಸಂಬಂಧ ಟೆಂಡರ್ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

ತನಿಖೆಗೆ ಸೂಚನೆ: ‘ಬಳ್ಳಾರಿ ಆಸ್ಪತ್ರೆಗಳಲ್ಲಿ ತೊಂದರೆ ಅನುಭವಿಸಿದ್ದ ಒಂಬತ್ತು ಬಾಣಂತಿಯರಿದ್ದರು. ಅವರಲ್ಲಿ ನಾಲ್ವರು ಮೃತಪಟ್ಟಿದ್ದರು. ಐದನೆಯವರು ತೀವ್ರ ನಿಗಾ ಘಟಕದಲ್ಲಿದ್ದು, ಗುರುವಾರವಷ್ಟೇ ಹೊರಗೆ ಬಂದಿದ್ದರು. ಅವರ ಆರೋಗ್ಯ ಸುಧಾರಿಸಿತ್ತು. ಸ್ವತಃ ತಾವೇ ಓಡಾಡುವಷ್ಟು ಶಕ್ತರಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕೂಲಂಕಷ ತನಿಖೆಗೆ ಸೂಚಿಸಲಾಗಿದೆ’ ಎಂದು ದಿನೇಶ್ ಗುಂಡೂವಾರ್ ಹೇಳಿದರು.

‘ಇದೇ ಏಪ್ರಿಲ್ನಿಂದ ರಾಜ್ಯದಲ್ಲಿ ಒಟ್ಟು 327 ಬಾಣಂತಿಯರು ಮೃತಪಟ್ಟಿದ್ದಾರೆ. ಸಾವು ಏಕೆ ಸಂಭವಿಸಿತು ಎಂಬುದನ್ನು ಪತ್ತೆ ಮಾಡಲು 327 ಪ್ರಕರಣಗಳಲ್ಲೂ ತನಿಖೆ ನಡೆಸುವಂತೆ ಸೂಚಿಸಿದ್ದೇವೆ. ವೈದ್ಯಕೀಯ ಕಾರಣಕ್ಕೆ ಸಾವು ಸಂಭವಿಸಿವೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬುದನ್ನು ಪತ್ತೆ ಮಾಡಬೇಕಿದೆ’ ಎಂದು ಹೇಳಿದರು.

ಕಪ್ಪು ಪಟ್ಟಿಗೆ ಸೇರಿಸಲಾದ ಕಂಪನಿಯಿಂದ ಐವಿ ದ್ರಾವಣವನ್ನು ಖರೀದಿಸಲಾಗಿದೆ. ಅದರಿಂದಲೇ ಬಾಣಂತಿಯರು ಸತ್ತಿದ್ದಾರೆ. ರಾಜ್ಯ ಸರ್ಕಾರವೇ ಇದರ ಹೊಣೆ ಹೊರಬೇಕು
ಬಿ.ವೈ.ವಿಜಯೇಂದ್ರ ಅಧ್ಯಕ್ಷ ಬಿಜೆಪಿ ರಾಜ್ಯ ಘಟಕ

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ನನ್ನಿಂದ ಲೋಪವಾಗಿದ್ದರೆ ಖಂಡಿತವಾಗಿಯೂ ರಾಜೀನಾಮೆ ನೀಡಲು ನಾನು ಸಿದ್ಧನಿದ್ದೇನೆ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ

ಯಾವ ಕಾರಣಕ್ಕೆ ಹೀಗಾಗಿದೆ ಎಂಬುದನ್ನು ಪರಿಶೀಲಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಕಳಪೆ ಔಷಧ ಪೂರೈಸಿದ್ದ ಕಂಪನಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ
ಸಿದ್ದರಾಮಯ್ಯ ಮುಖ್ಯಮಂತ್ರಿ

‘ದ್ರಾವಣಕ್ಕೆ ರಾಜ್ಯದ ತಿರಸ್ಕಾರ ಕೇಂದ್ರದ ಪುರಸ್ಕಾರ’

‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಪೂರೈಸಿರುವ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂಬುದು ರಾಜ್ಯದ ಪ್ರಯೋಗಾಲಯಗಳು ನಡೆಸಿದ ಪರೀಕ್ಷೆಗಳಲ್ಲಿ ಪತ್ತೆಯಾಗಿತ್ತು. ಆದರೆ ಕೇಂದ್ರ ಸರ್ಕಾರದ ಔಷಧ ನಿಯಂತ್ರಕರು ಅದೇ ಐವಿ ದ್ರಾವಣವನ್ನು ಪುರಸ್ಕರಿಸಿದ್ದಾರೆ’ ಎಂದು ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು. ‘ಅಂತಹ ಕಂಪನಿಗಳು ಮತ್ತು ಅವುಗಳ ಉತ್ಪನ್ನಗಳು ಮಾರಾಟಕ್ಕೆ ಅರ್ಹ ಎಂದು ಕೇಂದ್ರದ ಸಂಸ್ಥೆಗಳು ವರದಿ ನೀಡುವ ಕಾರಣದಿಂದ ಅವುಗಳನ್ನು ರಾಜ್ಯ ಸರ್ಕಾರವು ಕಪ್ಪು ಪಟ್ಟಿಗೆ ಸೇರಿಸಲು ಸಾಧ್ಯವಾಗಿಲ್ಲ. ಅವುಗಳ ಉತ್ಪನ್ನಗಳನ್ನು ತಿರಸ್ಕರಿಸಲೂ ಆಗುವುದಿಲ್ಲ’ ಎಂದರು. ‘ಈ ಬಗ್ಗೆ ಕೇಂದ್ರ ಔಷಧ ನಿಯಂತ್ರಕರಿಗೆ ಪತ್ರ ಬರೆದಿದ್ದೇವೆ. ಅವರ ಕ್ರಮದಿಂದ ತೊಂದರೆಯಾಗುತ್ತಿದೆ ಎಂಬುದನ್ನು ಕೂಲವಾಗುವಂತೆ ಟೆಂಡರ್ ನಿಯಮಗಳನ್ನು ಕಠಿಣಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ’ ಎಂದರು.

ಸರ್ಕಾರಕ್ಕೆ ಕರುಣೆ ಇಲ್ಲವೇ?: ಅಶೋಕ

‘ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದರೂ ಮುಖ್ಯಮಂತ್ರಿಯಾಗಲೀ ಆರೋಗ್ಯ ಸಚಿವರಾಗಲೀ ಸಂತ್ರಸ್ತ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಕೆಲಸ ಮಾಡುತ್ತಿಲ್ಲ. ಇವರಿಗೆ ಇವರ ಸರ್ಕಾರಕ್ಕೆ ಕರುಣೆ ಇಲ್ಲವೇ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರಶ್ನಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕೋವಿಡ್ ಸಂದರ್ಭದಲ್ಲಿ ಆಮ್ಲಜನಕದ ಕೊರತೆಯಿಂದ ಚಾಮರಾಜನಗರದಲ್ಲಿ ಜನರು ಸತ್ತಾಗ ಇದೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಅಲ್ಲಿಗೆ ಭೇಟಿ ನೀಡಿದ್ದರು. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಕಣ್ಣೀರು ಸುರಿಸಿದ್ದರು. ಆದರೆ ಈಗ ಬಾಣಂತಿಯರ ಸಾವಿಗೆ ಸುರಿಸಲು ಇವರಲ್ಲಿ ಕಣ್ಣೀರು ಇಲ್ಲವೇ’ ಎಂದು ಪ್ರಶ್ನಿಸಿದರು.

ಲೋಕಾಯುಕ್ತಕ್ಕೆ ಮನವಿ ‘ಬಳ್ಳಾರಿ ಮತ್ತು ರಾಜ್ಯದ ವಿವಿಧ ಜಿಲ್ಲಾ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ಶಿಶು ಮರಣದ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ನಿಯೋಗವು ಲೋಕಾಯುಕ್ತರನ್ನು ಒತ್ತಾಯಿಸಿದೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಶಾಸಕ ಸಿ.ಕೆ.ರಾಮಮೂರ್ತಿ ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ನಾರಾಯಣ್ ಮತ್ತು ಇತರರು ಇದ್ದ ನಿಯೋಗವು ಶುಕ್ರವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

‘ಈ ಅವಘಡಗಳ ಹಿಂದೆ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈವಾಡ ಇದೆ. ಈ ಸಾವುಗಳಿಗೆ ಕಾರಣವಾದ ಔಷಧ ಮತ್ತು ಕಳಪೆ ಗುಣಮಟ್ಟದ ಔಷಧ ಖರೀದಿಯ ಹಿಂದೆ ಇರುವವರನ್ನು ರಕ್ಷಿಸುವ ಕೆಲಸವಾಗುತ್ತಿದೆ. ಪ್ರಕರಣದ ಸತ್ಯವನ್ನು ಹೊರಗೆ ತರಲು ನ್ಯಾಯಾಂಗ ತನಿಖೆ ಅವಶ್ಯ ಇದೆ. ಇದರಲ್ಲಿ ಲೋಕಾಯುಕ್ತ ಸಂಸ್ಥೆಯು ಮಧ್ಯಪ್ರವೇಶಿಸಬೇಕು’ ಎಂದು ನಿಯೋಗ ಮನವಿ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.