ಬೆಳ್ತಂಗಡಿ (ದಕ್ಷಿಣ ಕನ್ನಡ): ಅನುಮತಿ ಇಲ್ಲದೆ ಹಾಗೂ ಪೊಲೀಸರ ಸೂಚನೆ ನಿರ್ಲಕ್ಷಿಸಿ ಇಲ್ಲಿಯ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿ ವಿಧಾನ ಸೌಧದ ಮುಂಭಾಗ ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ಮಾಡಿದ ಆರೋಪದಲ್ಲಿ ಸೌಜನ್ಯ ತಾಯಿ ಕುಸುಮಾವತಿ, ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20 ಮಂದಿ ವಿರುದ್ಧ ಬೆಳ್ತಂಗಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಸೌಜನ್ಯ ಪರ ಹೋರಾಟಗಾರರ ವಿರುದ್ಧ ಪೊಲೀಸರು ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ಸೌಜನ್ಯ ಪರ ಹೋರಾಟಗಾರರು ಅ.27ರಂದು ಘೋಷಿಸಿದ್ದರು. ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಮನವಿ ನೀಡಲು ಬಂದಿದ್ದವರನ್ನು ಪೊಲೀಸರು ತಡೆದಿದ್ದರು. ಈ ಘಟನೆಗೆ ಸಂಬಂಧಿಸಿ ಇದೀಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ಶ್ರೀನಿವಾಸ ಗೌಡ, ರವೀಂದ್ರ ಶೆಟ್ಟಿ, ಪ್ರಸನ್ನ ರವಿ, ಉದಯ ಪ್ರಸಾದ್, ಕುಸುಮಾವತಿ, ವೆಂಕಪ್ಪ ಕೋಟ್ಯಾನ್, ತನುಷ್ ಶೆಟ್ಟಿ, ಮೋಹನ್ ಶೆಟ್ಟಿ, ಜಯರಾಮ ಗೌಡ, ಸಂತೋಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಯೋಗೀಶ್ ಕುಲಾಲ್, ನಾರಾವಿ ವಿಜಯ, ರವೀಂದ್ರ ಶೆಟ್ಟಿ ಮುಡಿಪು, ಶಶಿಕಲಾ ಶೆಟ್ಟಿ, ಪೂಜಾಶ್ರೀ ಧರ್ಮಸ್ಥಳ, ಟಿಕ್ಕಿ ರವಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.