ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂನೆಸ್ಕೊ ಪಟ್ಟಿಗೆ ಬೇಲೂರು, ಹಳೆಬೀಡು, ಸೋಮನಾಥಪುರ ದೇಗುಲ

Published 19 ಸೆಪ್ಟೆಂಬರ್ 2023, 1:47 IST
Last Updated 19 ಸೆಪ್ಟೆಂಬರ್ 2023, 1:47 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಮತ್ತು ಮೈಸೂರು ಜಿಲ್ಲೆಯ ಸೋಮನಾಥಪುರ ದೇಗುಲಗಳಿಗೆ ಇದೀಗ ಜಾಗತಿಕ ಮನ್ನಣೆ ದೊರೆತಿದ್ದು, ಯೂನೆಸ್ಕೊ ‘ವಿಶ್ವ ಪಾರಂಪರಿಕ ತಾಣ’ಗಳ ಪಟ್ಟಿಗೆ ಈ ಮೂರು ದೇಗುಲಗಳನ್ನು ಸೇರ್ಪಡೆ ಮಾಡಲಾಗಿದೆ.

ಸೋಮವಾರ ಸೌದಿ ಅರೆಬಿಯಾದ ರಾಜಧಾನಿ ರಿಯಾದ್‌ನಲ್ಲಿ ನಡೆದ ಯೂನೆಸ್ಕೋದ 45ನೇ ಸರ್ವ ಸದಸ್ಯರ ಸಭೆಯಲ್ಲಿ ಈ ಮೂರು ದೇಗುಲಗಳನ್ನು ಯುನೆಸ್ಕೊದ ಪಟ್ಟಿಗೆ ಸೇರಿಸಲಾಗಿದೆ.

2014ರಲ್ಲಿ ಆಯ್ಕೆ ಪಟ್ಟಿಗೆ ಈ ದೇಗುಲಗಳನ್ನು ಸೇರ್ಪಡೆಗೊಳಿಸಲಾಗಿತ್ತು. 2018ರಲ್ಲಿ ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‌ಐ)ಗೆ ರಾಜ್ಯ ಸರ್ಕಾರವು ಈ ದೇಗುಲಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿತ್ತು. 2022ರಲ್ಲಿ ಅಂತರಾಷ್ಟ್ರೀಯ ಪುರಾತನ ಸ್ಮಾರಕ ಮತ್ತು ಪ್ರದೇಶಗಳ ಸಮಿತಿಯು ಇಲ್ಲಿಗೆ ಭೇಟಿ ನೀಡಿದ್ದು, ಈ ದೇಗುಲಗಳ ಬಗ್ಗೆ ಯೂನೆಸ್ಕೊಗೆ ವರದಿ ನೀಡಿತ್ತು.

ಯೂನೆಸ್ಕೊದ ಸರ್ವ ಸದಸ್ಯರ ಸಭೆಯಲ್ಲಿ ಭಾರತವೂ ಸೇರಿದಂತೆ 21 ದೇಶಗಳು ಈ ಮೂರು ದೇಗುಲಗಳನ್ನು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ ಮಾಡಲು ಸರ್ವಾನುಮತದ ಒಪ್ಪಿಗೆ ನೀಡಿದ್ದವು.

ಈಗಾಗಲೇ ರಾಜ್ಯದ ಪಶ್ಚಿಮಘಟ್ಟ ಪ್ರದೇಶ, ಹಂಪೆ, ಪಟ್ಟದಕಲ್ಲು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT