ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಿಗೆ ಮೇಜು, ಬೆಂಚುಗಳ ಜೊತೆಗೆ ಇಂಟರಾಕ್ಟಿವ್ ಎಲ್ಇಡಿ ಬೋರ್ಡ್ಗಳನ್ನು ಒದಗಿಸಲು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಬೆಂಗಳೂರು ರೋಟರಿ ಕ್ಲಬ್ (ಆರ್ಸಿಬಿ) ಮತ್ತು ಶಾಲಾ ಶಿಕ್ಷಣ ಇಲಾಖೆ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು.

ರೋಟರಿ ಇಂಟರಾಕ್ಟಿವ್ ಲರ್ನಿಂಗ್ 2025-26 ಹೆಸರಿನ ಈ ಯೋಜನೆಯಡಿ ಟ್ರಸ್ಟ್ ಮುಖಾಂತರ ರಾಜ್ಯದ 100 ಸರ್ಕಾರಿ ಶಾಲಾ ತರಗತಿಗಳಿಗೆ ಬೆಂಚು-ಮೇಜುಗಳ ಜೊತೆಗೆ 75 ಇಂಚಿನ ಇಂಟರಾಕ್ಟಿವ್ ಬೋರ್ಡ್ಗಳನ್ನು ಯುಪಿಎಸ್ ಸೌಲಭ್ಯ ಸಹಿತ ಒದಗಿಸಲಿದೆ.

ಸುಮಾರು ₹3.5 ಕೋಟಿ ವೆಚ್ಚದಲ್ಲಿ ಜಾರಿಗೊಳ್ಳುವ ಈ ಯೋಜನೆಯನ್ನು 2026ರ ಜೂನ್ 30ರೊಳಗೆ ಪೂರ್ಣಗೊಳಿಸುವ ಗುರಿ ಇದೆ. ಹೆಚ್ಚುವರಿ ಸಿಎಸ್ಆರ್ ನೆರವು ದೊರೆತರೆ, 2026-27ರಲ್ಲಿ ಇನ್ನಷ್ಟು ತರಗತಿಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ಸುಖೇನ್ ಮಾತನಾಡಿ, ‘ಕನಿಷ್ಠ 1,000 ಮೇಜು, ಬೆಂಚುಗಳು ಮತ್ತು ಸ್ಮಾರ್ಟ್ ಬೋರ್ಡ್ಗಳನ್ನು ಸರ್ಕಾರಿ ಶಾಲೆಗಳಲ್ಲಿ ಒದಗಿಸುವ ಉದ್ದೇಶವನ್ನು ಕ್ಲಬ್ ಹೊಂದಿದೆ’ ಎಂದು ಹೇಳಿದರು.

ಮಧು ಬಂಗಾರಪ್ಪ ಅವರು, ‘ರೋಟರಿಯ ಈ ಪಾಲ್ಗೊಳ್ಳುವಿಕೆಯಿಂದ ಶಾಲೆಗಳ ಮೂಲಸೌಕರ್ಯ ಬಲಪಡಿಸುವಲ್ಲಿ ಹೆಚ್ಚಿನ ಸಮುದಾಯ ಪಾಲ್ಗೊಳ್ಳುವಿಕೆ ಸಾಧ್ಯವಾಗುತ್ತದೆ’ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಕೆ.ವಿದ್ಯಾ ಕುಮಾರಿ, ರೋಟರಿ ಜಿಲ್ಲಾ ಗವರ್ನರ್ ಎಲಿಜಬೆತ್ ಚೆರಿಯನ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ರೋಟರಿಯನ್ಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.