ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶನಿವಾರ ಸಂಜೆ ದೆಹಲಿಗೆ ಹೊರಡಬೇಕಿದ್ದ ಇಂಡಿಗೊ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬಂದ ಮಾಹಿತಿ ಕೆಲಕಾಲ ಆತಂಕ ಸೃಷ್ಟಸಿತ್ತು. ತಪಾಸಣೆ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಈ ವಿಮಾನದಲ್ಲಿ ಬಾಂಬ್ ಇಡಲಾಗಿದೆ’ ಎಂದು ವಿಮಾನದ ಶೌಚಾಲಯದ ಟಿಷ್ಯೂ ಪೇಪರ್ ಮೇಲೆ ಬರೆದಿರುವುದು ಪ್ರಯಾಣಿಕರೊಬ್ಬರಿಗೆ ಕಂಡಿತು.

ತಕ್ಷಣ ಈ ವಿಷಯವನ್ನು ಅವರು ವಿಮಾನದ ಸಿಬ್ಬಂದಿಗೆ ಗಮನಕ್ಕೆ ತಂದರು. ಸಿಬ್ಬಂದಿ ಪೈಲಟ್ಗೆ ಹಾಗೂ ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್ಗೆ ಮಾಹಿತಿ ನೀಡಿದರು.

ತಕ್ಷಣ ಎಲ್ಲಾ ಪ್ರಯಾಣಿಕರನ್ನು ತುರ್ತಾಗಿ ವಿಮಾನದಿಂದ ಕೆಳಗೆ ಇಳಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಭದ್ರತಾ ಸಿಬ್ಬಂದಿ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದರು. ಆದರೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ. ಕೊನೆಗೆ ಇದು ಸುಳ್ಳು ಬಾಂಬ್ ಬೆದರಿಕೆ ಎಂದು ದೃಢಪಡಿಸಿದ ನಂತರ ವಿಮಾನ ದೆಹಲಿಗೆ ಹಾರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-15-1946054962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.