ಆರ್ಥಿಕ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳನ್ನು ಈಡೇರಿಸುವ ಭರವಸೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ ಕಾರಣ ರಾಜ್ಯ ಸಾರಿಗೆ ಒಕ್ಕೂಟವು ಮುಷ್ಕರವನ್ನು ಸೋಮವಾರ ಮಧ್ಯಾಹ್ನ ಹಿಂಪಡೆದುಕೊಂಡಿದೆ. ‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೊ ಬೈಕ್ ಟ್ಯಾಕ್ಸಿ ನಿಷೇಧಿಸಬೇಕು ಎಂಬುದೂ ಸೇರಿ 30 ಬೇಡಿಕೆಗಳನ್ನು ಈಡೇರಿಸಬೇಕು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಭಾನುವಾರ ರಾತ್ರಿ 12ರಿಂದ ಸೋಮವಾರ ರಾತ್ರಿ 12ರವರೆಗೆ ಮುಷ್ಕರ ನಡೆಸಲು ಖಾಸಗಿ ಬಸ್, ಆಟೊ, ಟ್ಯಾಕ್ಸಿ, ಶಾಲಾ ವಾಹನ ಸಹಿತ 32 ಸಂಘಟನೆಗಳ ಒಕ್ಕೂಟ ಕರೆ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.