ಬೆಂಗಳೂರು: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವುಗಳ ಅಕ್ರಮ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಹತ್ಯೆ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಆಗ್ರಹಿಸಿದೆ.

ಗುರುವಾರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಚ್ಪಿಯ ಸದಸ್ಯರಾದ ಸುನಿಲ್ ದುಗಾರ್, ಶಿವಕುಮಾರ್, ಮೋಹನ್, ಕಿರಣ್, ಗೋವರ್ಧನ್, ‘ಅಕ್ರಮ ಕಸಾಯಿಖಾನೆಗಳನ್ನು ಗುರುತಿಸಿ, ದಾಳಿ ನಡೆಸುವ ಮೂಲಕ ಶಾಶ್ವತವಾಗಿ ಮುಚ್ಚಬೇಕು. ಜಾನುವಾರು ಹತ್ಯೆ ನಡೆದ ಮನೆ, ಕಟ್ಟಡ, ಖಾಲಿ ಜಮೀನುಗಳನ್ನು ಜಪ್ತಿ ಮಾಡಿ ಮುಟ್ಟುಗೋಲು ಹಾಕಬೇಕು’ ಎಂದು ಒತ್ತಾಯಿಸಿದರು.

‘ಪೊಲೀಸರು ಗೋಹತ್ಯೆಯ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ವಾಹನಗಳಲ್ಲಿ ಅಕ್ರಮವಾಗಿ ಗೋಸಾಗಾಟ ಆಗದಂತೆ ಎಚ್ಚರಿಕೆ ವಹಿಸಬೇಕು. ಅಕ್ರಮ ಗೋವುಗಳ ವ್ಯವಹಾರದ ಜಾಲವನ್ನು ಪತ್ತೆಹಚ್ಚಿ, ಆರೋಪಿಗಳನ್ನು ಬಂಧಿಸಬೇಕು. ಇಂತಹ ಆರೋಪಿಗಳಿಗೆ 5 ವರ್ಷ ಶಿಕ್ಷೆ ಹಾಗೂ ಜಾನುವಾರು ವಧೆ ಅಥವಾ ವಧೆ ಪ್ರಯತ್ನಕ್ಕೆ ದಂಡ ವಿಧಿಸಬೇಕು. ಅನಧಿಕೃತ ಸ್ಥಳಗಳಲ್ಲಿ ಕಟ್ಟಿ ಹಾಕಿದ ಜಾನುವಾರುಗಳನ್ನು ವಧೆಗೆ ತಯಾರಿ ಎಂದು ಪರಿಗಣಿಸಿ, ವಶಪಡಿಸಿಕೊಂಡು ಸರ್ಕಾರಿ ಗೋಶಾಲೆಗೆ ಹಸ್ತಾಂತರಿಸಬೇಕು’ ಎಂದು ಆಗ್ರಹಿಸಿದರು.

‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೋಹತ್ಯೆ (ಕುರ್ಬಾನಿ) ಆಗದಂತೆ ವಿವಿಧ ಇಲಾಖೆಗಳ ಜೊತೆಗೆ ಸಮನಯ್ವದಿಂದ ಕೆಲಸ ಮಾಡಬೇಕು. ಗೋಹತ್ಯೆ ಮುಕ್ತ ಬಕ್ರೀದ್ ಆಚರಿಸುವ ಮೂಲಕ ಸೌಹಾರ್ದತೆ ಕಾಪಾಡಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-4-1233707803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.