ಬೆಂಗಳೂರು: ‘ನೀಟ್ ಫಲಿತಾಂಶಕ್ಕೆ ಕಾಯದೆ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕೌನ್ಸಿಲಿಂಗ್ ಆರಂಭಿಸುವ ಕುರಿತು ವೈದ್ಯಕೀಯ ಶಿಕ್ಷಣ ಸಚಿವರ ಜತೆ ಚರ್ಚಿಸಿ, ತೀರ್ಮಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೆಲ ವರ್ಷಗಳಿಂದ ನೀಟ್ ಮತ್ತು ಸಿಇಟಿ ಕೌನ್ಸಿಲಿಂಗ್ ಒಟ್ಟಿಗೆ ಮಾಡುತ್ತ ಬಂದಿದ್ದೇವೆ. ಪ್ರತಿಭಾವಂತರಿಗೆ ಅವಕಾಶ ಸಿಗುತ್ತಿತ್ತು. ಆದರೆ, ನೀಟ್ ಮರು ಪರೀಕ್ಷೆಯಿಂದ ವಿಳಂಬವಾಗುತ್ತಿದೆ. ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಮುಂದಿನ ವರ್ಷದಿಂದ ಆನ್ಲೈನ್ ಮೂಲಕ ನೀಟ್ ನಡೆಸುವ ಕೇಂದ್ರದ ಚಿಂತನೆ ಎಷ್ಟರ ಮಟ್ಟಿಗೆ ಯಶಸ್ವಿಯಾಗು ತ್ತದೆ ಎಂದು ನೋಡಬೇಕು. ಗ್ರಾಮೀಣ ಭಾಗದ ಮಕ್ಕಳ ಪರಿಸ್ಥಿತಿ ಕುರಿತೂ ಚಿಂತನೆ ಮಾಡಬೇಕಿದೆ. ಕೇಂದ್ರ ಸರ್ಕಾರ ವಸ್ತುಸ್ಥಿತಿ ಅರ್ಥ ಮಾಡಿಕೊಳ್ಳದೆ ಹೇಳಿಕೆ ನೀಡುತ್ತಿದೆ. ಆನ್ಲೈನ್ ಪರೀಕ್ಷೆಗೆ ಸಾಕಷ್ಟು ತಯಾರಿ ಆಗಬೇಕು. ಅಣಕು ಪರೀಕ್ಷೆ ನಡೆಯಬೇಕು. ಈ ಪ್ರಕ್ರಿಯೆಗಳೂ ಸುಲಭವಲ್ಲ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-4-1943102835

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.