ಬೆಂಗಳೂರು: ಸಿಇಟಿ ಕೇಂದ್ರಕ್ಕೆ ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಿದ್ದು ದೃಢಪಟ್ಟಿದ್ದು, ಕೋರಮಂಗಲದ ಕೃಪಾನಿಧಿ ಪದವಿಪೂರ್ವ ಕಾಲೇಜಿನಲ್ಲಿ ಭವಿಷ್ಯದ ಯಾವುದೇ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬಾರದು ಎಂದು ಬೆಂಗಳೂರು ನಗರ ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ ವಿಚಾರಣಾ ವರದಿಯಲ್ಲಿ ಶಿಫಾರಸು ಮಾಡಿದೆ.

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಕಲ್ಪಿಸಲು ಏ.23 ಮತ್ತು 24ರಂದು ಸಿಇಟಿ ನಡೆದಿತ್ತು. ಮೊದಲ ದಿನ ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆ ಬರೆಯಲು ಕೃಪಾನಿಧಿ ಕಾಲೇಜಿಗೆ ಬಂದಿದ್ದವರನ್ನು ಪ್ರವೇಶದ್ವಾರದಲ್ಲಿ ತಪಾಸಣೆ ನಡೆಸಿದ್ದ ಸಿಬ್ಬಂದಿ ಜನಿವಾರವನ್ನು ತೆಗೆಸಿದ್ದಾರೆ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿದ್ದರು. ಈ ಕುರಿತು ಅವರ ಪೋಷಕರು ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಘಟನೆ ಕುರಿತು ತನಿಖೆ ನಡೆಸಿ, ವರದಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿತ್ತು. ‘ಜನಿವಾರ ತೆಗೆಸಿದ ಪ್ರಕರಣ ಒಂದು ಸೂಕ್ಷ್ಮ ವಿಚಾರವಾಗಿದೆ. ಇಂತಹ ಯಾವುದೇ ಧಾರ್ಮಿಕ ದಿರಿಸುಗಳನ್ನು ತೆಗೆಸದಂತೆ ಪರೀಕ್ಷಾ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ತರಬೇತಿಯಲ್ಲೇ ಸ್ಪಷ್ಟವಾಗಿ ಹೇಳಲಾಗಿತ್ತು. ಸ್ಪಷ್ಟವಾದ ವಸ್ತ್ರಸಂಹಿತೆಯನ್ನೂ ಬಿಡುಗಡೆ ಮಾಡಿದೆ. ಆದರೂ ಇಂತಹ ಘಟನೆಗಳು ನಡೆದಿದೆ ಎಂದರೆ ಉದ್ದೇಶಪೂರ್ವಕ ಎನ್ನುವ ಅನುಮಾನ ಬರುತ್ತದೆ. ಹಾಗಾಗಿ, ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಿ, ವರದಿ ನೀಡಬೇಕು’ ಎಂದು ಪತ್ರದಲ್ಲಿ ಕೋರಿತ್ತು. ಅದರಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಬೆಂಗಳೂರು ನಗರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಾಲ್ವರ ಸಮಿತಿ ರಚಿಸಿದ್ದರು. ಎರಡು ದಿನಗಳ ಒಳಗೆ ವರದಿ ಸಲ್ಲಿಸಲು ಸೂಚಿಸಿದ್ದರು.

ಘಟನೆಯ ನಂತರ ಕೃಪಾನಿಧಿ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿರುವ ಕಾಲೇಜಿನ ಡಿ.ಸುಧಾಕರ್, ಆರ್.ಸರಿತಾ ಹಾಗೂ ಗಿರಿಜಮ್ಮ ಅವರು ಕರ್ತವ್ಯಲೋಪ ಎಸಗಿದ್ದಾರೆ. ಕೆಇಎ ವಸ್ತ್ರಸಂಹಿತೆ ನಿಯಮಗಳನ್ನು ಅರ್ಥ ಮಾಡಿಕೊಳ್ಳದೆ ಕೆಇಎ ಹಾಗೂ ಸರ್ಕಾರಕ್ಕೆ ಮುಜುಗರವಾಗುವಂತಹ ಕೆಲಸ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.