ನವದೆಹಲಿ: ಭೂಸ್ವಾಧೀನ ವಿಳಂಬ ಸೇರಿದಂತೆ ವಿವಿಧ ಕಾರಣಗಳಿಂದ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಕೇಳಿದ್ದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

ಈ ಎಕ್ಸ್ಪ್ರೆಸ್ವೇ ಬೆಂಗಳೂರು–ಚೆನ್ನೈ ಕೈಗಾರಿಕಾ ಕಾರಿಡಾರ್ನ ಭಾಗವಾಗಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಎರಡು ನಗರಗಳ ನಡುವಿನ ಪ್ರಯಾಣದ ಅವಧಿ ಎರಡೂವರೆ ಗಂಟೆಗಳಿಗೆ ಇಳಿಯಲಿದೆ. 262.4 ಕಿ.ಮೀ. ಉದ್ದದ ಮಾರ್ಗಕ್ಕೆ ₹15,188 ಕೋಟಿ ವೆಚ್ಚ ಮಾಡಲಾಗುತ್ತಿದೆ. ಸದ್ಯ ನಾಲ್ಕು ಪ್ಯಾಕೇಜ್ಗಳ ಕೆಲಸ ಮುಗಿದಿದ್ದು, ಎಲ್ಲ ಪ್ಯಾಕೇಜ್ಗಳ ಕಾಮಗಾರಿಗಳು 2026ಕ್ಕೆ ಮುಗಿಯಲಿವೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.