ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರ, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Last Updated 2 ಸೆಪ್ಟೆಂಬರ್ 2020, 9:49 IST
ಅಕ್ಷರ ಗಾತ್ರ

ಬೆಂಗಳೂರು: ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.2ರಿಂದ 5ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 2, 3 ಮತ್ತು 5 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರುಗಳಲ್ಲಿ ಬುಧವಾರ ಗುಡುಗು ಸಹಿತ ಮಳೆ ಸುರಿಯುವ ಸೂಚನೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT