ಬೆಂಗಳೂರು: ‘ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಹೂವಿನ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ’ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು.

‘ಮಾಧ್ಯಮ ಸಲಹೆಗಾರ ಹುದ್ದೆ ಪ್ರತಿ ದಿನ ಸವಾಲಿನದ್ದು. ಬೆಳಿಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತಿದಿನ ನಿರ್ವಹಿಸುತ್ತಿದ್ದೇನೆ. ನನ್ನ ಹೊಣೆಗಾರಿಕೆ ಬಗ್ಗೆ ಯಾವತ್ತೂ ಭ್ರಮನಿರಸನ ಆಗಿಲ್ಲ‘ ಎಂದು ಹೇಳಿದರು.

ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿ ಅವರು ಯಾವತ್ತೂ ಧಕ್ಕೆ ಆಗದಂತೆ ನೋಡಿಕೊಂಡಿದ್ದಾರೆ ಎಂದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ವಿಧಿಸಿರುವ ಕಠಿಣವಾದ ಎರಡು ಷರತ್ತುಗಳನ್ನು ಸಡಿಲಗೊಳಿಸಲು ಸಭೆ ಮಾಡಿ, ತೀರ್ಮಾನಿಸಲಾಗಿದೆ. ಇದರಿಂದ ಆರು ಸಾವಿರಕ್ಕೂ ಹೆಚ್ಚಿನ ಪತ್ರಕರ್ತರಿಗೆ ಸವಲತ್ತು ಸಿಗುವ ಸಾಧ್ಯತೆಗಳಿವೆ. ಜಾಹೀರಾತು ದರ ಪರಿಷ್ಕರಣೆ ಕೂಡ ಚರ್ಚೆಯಲ್ಲಿದೆ ಎಂದು ತಿಳಿಸಿದರು. ‘ನಾನು ಓದಿದ ಶಾಲೆಗೆ ಸರ್ಕಾರದ ನೆರವು ಒದಗಿಸಲು ಸಾಧ್ಯವಾಗಿದ್ದು, ಈ ಸರ್ಕಾರಿ ಶಾಲೆಗೆ ಮರುಜೀವ ಬಂದು ವಿದ್ಯಾರ್ಥಿಗಳ ಸಂಖ್ಯೆ 100ರ ಗಡಿ ದಾಟಿರುವುದು ಸಮಾಧಾನ ತಂದಿದೆ’ ಎಂದರು.

ಕೆಯುಡಬ್ಲ್ಯುಜೆ ಅಧ್ಯಕ್ಷ ಶಿವಾನಂದ ತಗಡೂರು, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ಪದಾಧಿಕಾರಿಗಳಾದ ಸೋಮಶೇಖರ್ ಕೆರಗೋಡು, ವಾಸುದೇವ ಹೊಳ್ಳ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-4-1012654500

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.